AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪ್ರಜಾಧ್ವನಿ ಯಾತ್ರೆಯನ್ನು ಅದಕ್ಕೆಂದೇ ಮೀಸಲಾಗಿರುವ ಬಸ್ಸಲ್ಲಿ ಪ್ರಯಾಣಿಸದೆ ಹೆಲಿಕಾಪ್ಟರ್ ಹಾರಾಡುತ್ತಿದ್ದಾರೆ!

ಸಿದ್ದರಾಮಯ್ಯ ಪ್ರಜಾಧ್ವನಿ ಯಾತ್ರೆಯನ್ನು ಅದಕ್ಕೆಂದೇ ಮೀಸಲಾಗಿರುವ ಬಸ್ಸಲ್ಲಿ ಪ್ರಯಾಣಿಸದೆ ಹೆಲಿಕಾಪ್ಟರ್ ಹಾರಾಡುತ್ತಿದ್ದಾರೆ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 10, 2023 | 5:45 PM

Share

ಬಿಳಿ ಪಂಚೆ ಮತ್ತು ಅದೇ ಬಣ್ಣದ ಜುಬ್ಬಾ ಧರಿಸಿದ ಸಿದ್ದರಾಮಯ್ಯ ಹೆಲಿಕಾಪ್ಟರ್ ನಿಂದ ಇಳಿದ ಮೇಲೆ ಖುದ್ದು ಅವರೇ ಜನರತ್ತ ಧಾವಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಯಾದಗಿರಿ: ಜಿಲ್ಲೆಯ ತಾಲ್ಲೂಕುಗಳಾಗಿರುವ ಸುರಪುರ (Shorapur) ಮತ್ತು ಶಹಾಪುರ (Shahapur) ನಡುವೆ ದೂರದ ಅಂತರವೇನೂ ಇಲ್ಲ. ಎರಡು ಪಟ್ಟಣಗಳ ನಡುವಿನ ಅಂತರ ಕೇವಲ 30 ಕಿಮೀ ಮಾತ್ರ. ಆದರೂ ಪ್ರಜಾಧ್ವನಿ ಯಾತ್ರೆಯನ್ನು ಉತ್ತರ ಕರ್ನಾಟಕ ಭಾಗದಲ್ಲಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು (Siddaramaiah) ಸುರಪುರದಿಂದ ಶಹಾಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಹೋದರು. ಅವರನ್ನು ಹೊತ್ತ ಚಾಪರ್ ಶಹಾಪುರ ಪಟ್ಟಣದ ಹೊರವಲಯದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಲ್ಯಾಂಡ್ ಆಗುವುದನ್ನು ನೀವು ನೋಡಬಹುದು. ಬಿಳಿ ಪಂಚೆ ಮತ್ತು ಅದೇ ಬಣ್ಣದ ಜುಬ್ಬಾ ಧರಿಸಿದ ಸಿದ್ದರಾಮಯ್ಯ ಹೆಲಿಕಾಪ್ಟರ್ ನಿಂದ ಇಳಿದ ಮೇಲೆ ಖುದ್ದು ಅವರೇ ಜನರತ್ತ ಧಾವಿಸುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 10, 2023 05:44 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.