ಸಿದ್ದರಾಮಯ್ಯ ನಿವೃತ್ತಿಯಾದರೆ ನಮಗೆ ಕಷ್ಟ: ಆತಂಕ ವ್ಯಕ್ತಪಡಿಸಿದ ಡಿಕೆಶಿ ಆಪ್ತ ಶಾಸಕ!
ಮುಂದಿನ ಅಂದರೆ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಅವರ ಅಭಿಮಾನಿಗಳು ಹಾಗೂ ಆಪ್ತ ನಾಯಕರು ಆತಂಕಗೊಂಡಿದ್ದು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ಈ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಹೆಚ್ಸಿ ಬಾಲಕೃಷ್ಣ (HC Balakrishna) ಸಹ ಮಾತನಾಡಿ, ಕಾಂಗ್ರೆಸ್ ಗಟ್ಟಿಯಾಗಿರಬೇಕು ಅಂದ್ರೆ ಸಿದ್ದರಾಮಯ್ಯ ಬೇಕೇ ಬೇಕು ಎಂದಿದ್ದಾರೆ.
ಬೆಂಗಳೂರು, (ಜುಲೈ 27): ಮಾಜಿ ಸಿಎಂ ಸಿದ್ದರಾಮಯ್ಯನವರು (Siddaramaiah) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಡ್ಯದ (Mandya) ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಮುಂದಿನ ಅಂದರೆ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಅವರ ಅಭಿಮಾನಿಗಳು ಹಾಗೂ ಆಪ್ತ ನಾಯಕರು ಆತಂಕಗೊಂಡಿದ್ದು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ಈ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಹೆಚ್ಸಿ ಬಾಲಕೃಷ್ಣ (HC Balakrishna) ಸಹ ಮಾತನಾಡಿ, ಕಾಂಗ್ರೆಸ್ ಗಟ್ಟಿಯಾಗಿರಬೇಕು ಅಂದ್ರೆ ಸಿದ್ದರಾಮಯ್ಯ ಬೇಕೇ ಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ,ಕಾಂಗ್ರೆಸ್ ಗಟ್ಟಿಯಾಗಿರಬೇಕು ಅಂದ್ರೆ ಸಿದ್ದರಾಮಯ್ಯ ಬೇಕೇ ಬೇಕು. ಸಿದ್ದರಾಮಯ್ಯ ಇಲ್ಲದಿದ್ದರೆ ನಮ್ಮ ಪಕ್ಷಕ್ಕೆ ಕಷ್ಟ ಆಗುತ್ತದೆ. ರಾಜ್ಯದ ಚುನಾವಣೆಯಿಂದ ಅವರು ಹಿಂದೆ ಸರಿಯಬಹುದು. ಕೇಂದ್ರದಲ್ಲಿ ಸಿದ್ದರಾಮಯ್ಯಗೆ ಉತ್ತಮ ಸ್ಥಾನಮಾನ ಸಿಗಬಹುದು. ರಾಜ್ಯಸಭೆ ಸ್ಥಾನ ಸಿಕ್ಕಿ ರಾಜಕೀಯದಲ್ಲಿ ಸಕ್ರಿಯವಾಗಿ ಇರಬಹುದು. ಸಿದ್ದರಾಮಯ್ಯ ನಿವೃತ್ತಿಯಾದರೆ ನಮಗೆ ಕಷ್ಟ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
