ಕಾವೇರಿ ನೀರಿಗಾಗಿ 2016ರಲ್ಲಿ ಸಂಕಷ್ಟ ಎದುರಾದಾಗ ದೇವೇಗೌಡರ ಮನೆಗೆ ಓಡೋಡಿ ಬಂದಿದ್ದ ಸಿದ್ದರಾಮಯ್ಯ ಈಗ ಅವರ ಬದ್ಧತೆಯನ್ನು ಪ್ರಶ್ನಿಸುತ್ತಿದ್ದಾರೆ: ಕುಮಾರಸ್ವಾಮಿ

ಈಗ ಅದೇ ಸಿದ್ದರಾಮಯ್ಯ, ಕಾವೇರಿ ನೀರಿಗೋಸ್ಕರ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ವಿರುದ್ಧ ಪ್ರತಭಟನೆಯ ಭಾಗವಾಗಿ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದ ದೇವೇಗೌಡರ ಬದ್ಧತೆ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಜರಿದರು. ಸುಪ್ರೀಮ್ ಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರದ ವಾದ ದುರ್ಬಲವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.

ಕಾವೇರಿ ನೀರಿಗಾಗಿ 2016ರಲ್ಲಿ ಸಂಕಷ್ಟ ಎದುರಾದಾಗ ದೇವೇಗೌಡರ ಮನೆಗೆ ಓಡೋಡಿ ಬಂದಿದ್ದ ಸಿದ್ದರಾಮಯ್ಯ ಈಗ ಅವರ ಬದ್ಧತೆಯನ್ನು ಪ್ರಶ್ನಿಸುತ್ತಿದ್ದಾರೆ: ಕುಮಾರಸ್ವಾಮಿ
|

Updated on: Sep 25, 2023 | 5:08 PM

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ (HD Devegowda) ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರೊಂದಿಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ (HD Kumaraswamy) ತಾವು ಮಾತಾಡುವ ಸಮಯ ಬಂದಾಗ, ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಬೇಜವಬ್ದಾರಿಯೇ ಕಾರಣ ಎಂದು ಹೇಳಿದರು. ಅವರಿಬ್ಬರು ದೆಹಲಿಗೆ ಹೋಗಿ ಕೇಂದ್ರ ಜಲಶಕ್ತಿ ಮಂತ್ರಿಯನ್ನು ಭೇಟಿಯಾದರಲ್ಲ, ಅವರೊಂದಿಗೆ ಏನು ಮಾತಾಡಿದರು? ಮಾತಾಡಿದ್ದನ್ನು ಯಾಕೆ ಬಹಿರಂಗವಾಗಿ ಹೇಳುತ್ತಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. 2016-17 ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇದೇ ತೆರನಾದ ಸಂಕಷ್ಟ ಎದುರಾಗಿತ್ತು. ಆಗ ಅವರು ದೇವೇಗೌಡರಲ್ಲ್ಲಿಗೆ ಓಡಿಬಂದು ಕಾಪಾಡಿ ಅಂತ ಅವಲತ್ತುಕೊಂಡಿದ್ದರು. ಈಗ ಅದೇ ಸಿದ್ದರಾಮಯ್ಯ, ಕಾವೇರಿ ನೀರಿಗೋಸ್ಕರ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ವಿರುದ್ಧ ಪ್ರತಭಟನೆಯ ಭಾಗವಾಗಿ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದ ದೇವೇಗೌಡರ ಬದ್ಧತೆ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಜರಿದರು. ಸುಪ್ರೀಮ್ ಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರದ ವಾದ ದುರ್ಬಲವಾಗಿತ್ತು ಎಂದು ಹೇಳಿದ ಕುಮಾರಸ್ವಾಮಿ ತಮ್ಮ ಮತ್ತು ಅಮಿತ್ ಶಾ ನಡುವೆ ಕಾವೇರಿ ನೀರಿಗೆ ಸಂಬಂಧಿಸಿದಂತೆ ನಡೆದ ಮಾತುಕತೆಯ ಬಗ್ಗೆ ಹೇಳಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ