Karnataka Assembly Polls; ಬಸವರಾಜ ಬೊಮ್ಮಾಯಿ ಅಡಳಿತಾವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ: ಡಿಕೆ ಶಿವಕುಮಾರ್
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಉಡುಪಿ: ಲಿಂಗಾಯತ ಸಮುದಾಯದವರಾಗಿರುವ ಬಸವರಾಜ್ ಬೊಮ್ಮಾಯಿ (Basavaraj Bommai) ಅವರ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಅಂತ ಸಿದ್ದರಾಮಯ್ಯ (Siddaramaiah) ಹೇಳಿದ್ದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಮರ್ಥಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಬಿಜೆಪಿಯಲ್ಲಿದ್ದ ಗೂಳಿಹಟ್ಟಿ ಶೇಖರ್, ಹೆಚ್ ವಿಶ್ವನಾಥ್, ನೆಹ್ರೂ ಓಲೇಕಾರ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದನ್ನೇ ಸಿದ್ದರಾಮಯ್ಯ ಪುನರಾವರ್ತಿಸಿದ್ದಾರೆ. ಪಿಎಸ್ ಐ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ರೂ. ಒಂದು ಕೋಟಿ, ರೂ. 80 ಲಕ್ಷದವರೆಗೆ ಲಂಚ ತೆಗೆದಿಕೊಳ್ಳಲಾಗಿತ್ತು, ಇದೆಲ್ಲ ಯಾರ ಕಾಲದಲ್ಲಿ ಆಗಿದ್ದು ಎಂದು ಶಿವಕುಮಾರ ಕೇಳಿದರು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರ ನಡೆದಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
