ಹಾಸನದ ಎಲ್ಲ ಅಸೆಂಬ್ಲಿ ಸ್ಥಾನಗಳನ್ನು ಗೆಲ್ಲುತ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದು ಕಾರ್ಯಕರ್ತರನ್ನು ಹುರಿದುಂಬಿಸಲು: ಬಾಲಕೃಷ್ಣ
ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿಯವರು ಮುಚ್ಚಿಹೋಗಿರುವ ಮತ್ತು ರೋಗಗ್ರಸ್ತ ಅನೇಕ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ, ಎರಡು ಬಾರಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅವರು ರೈತರ ಪರ ಮತ್ತು ಜನಪರ ಕಾರ್ಯಕ್ರಮಗಳನ್ನು ನೀಡಿದರು ಎಂದು ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಹೇಳಿದರು.
ಹಾಸನ: ನಿನ್ನೆ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಹೆಚ್ ಡಿ ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರದ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಲ್ಲೆಯ ಎಲ್ಲ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕ ಸಿಎನ್ ಬಾಲಕೃಷ್ಣ, ತಮ್ಮ ಕಾರ್ಯಕರ್ತರನ್ನು ಹುರಿದುಂಬಿಸಲು ಸಿಎಂ ಹಾಗೆ ಹೇಳಿರುತ್ತಾರೆ, ಅದರೆ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿಯವರು ಮಾಡಿದ ಅಭಿವೃದ್ಧಿ ಕೆಲಸಗಳು ಜನರ ಮುಂದೆ ಸಾಕ್ಷಿಯಾಗಿ ನಿಂತಿವೆ, ದೇವೇಗೌಡರು ಯಾರನ್ನೂ ತುಳಿದಿಲ್ಲ, ಅವರು ಮತ್ತು ಕುಮಾರಸ್ವಾಮಿ ಜನಪರ ಕೆಲಸಗಳನ್ನು ಮಾಡಿ ಜನರ ಮನಸ್ಸಲ್ಲಿ ಉಳಿದಿದ್ದಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಡಿ ಬಿಡುಗಡೆ ಮಾಡಿ ಬದುಕನ್ನು ಹಾಳು ಮಾಡಿದವರು ಒಬ್ಬ ಮಹಿಳೆಗಾದರೂ ಸಾಂತ್ವನ ಹೇಳಿದರೇ? ಕುಮಾರಸ್ವಾಮಿ
Latest Videos