Siddaramaiah; ನಾವು ನೀಡಿದ 5 ಗ್ಯಾರಂಟಿಗಳಿಗೆ ಇಂದೇ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸುತ್ತೇವೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: May 20, 2023 | 2:38 PM

ರಾಹುಲ್ ಗಾಂಧಿ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಮತ್ತು ಅಧಿಕಾರಕ್ಕೆ ಬರಲು ಕರ್ನಾಟಕದ 7 ಕೋಟಿ ಕನ್ನಡಿಗರ ಆಶೀರ್ವಾದವೇ ಕಾರಣವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಕಂಠೀರವ ಕ್ರೀಡಾಂಗಣದಲ್ಲಿ ಹೇಳಿದರು. ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ 5 ಪ್ರಮುಖ ಗ್ಯಾರಂಟಿಗಳನ್ನು (5 guarantees) ಇವತ್ತಿನ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು. ರಾಹುಲ್ ಗಾಂಧಿ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದೆ ಎಂದು ಹೇಳಿದ ಮುಖ್ಯಮಂತ್ರಿಗಳು ಪಕ್ಷದ ಶ್ರೇಯಸ್ಸಿಗೆ ಕಾರಣರಾದ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯದ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.