Prajadhavni Yatre; ರಮೇಶ್ ಜಾರಕಿಹೊಳಿ ಹೇಳುತ್ತಿರುವ ಬಿಜೆಪಿ ನಾಯಕರ ಸಿಡಿಗಳ ಬಗ್ಗೆ ನಂಗೇನೂ ಗೊತ್ತಿಲ್ಲ: ಸಿದ್ದರಾಮಯ್ಯ

|

Updated on: Mar 14, 2023 | 2:56 PM

ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಬಳಿ ಬಿಜೆಪಿ ನಾಯಕರ ಸಿಡಿಗಳಿವೆ ಎಂದು ಆರೋಪಿಸುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ನಂಗೇನೂ ಗೊತ್ತಿಲ್ಲ, ಗೊತ್ತಿರದ ವಿಷಯದ ಬಗ್ಗೆ ನಾನು ಮಾತಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಭಾಗವಾಗಿ ದಾವಣಗೆರೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬಳಿ ಬಿಜೆಪಿ ನಾಯಕರ ಸಿಡಿಗಳಿವೆ ಎಂದು ಆರೋಪಿಸುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ನಂಗೇನೂ ಗೊತ್ತಿಲ್ಲ, ಗೊತ್ತಿರದ ವಿಷಯದ ಬಗ್ಗೆ ನಾನು ಮಾತಾಡುವುದಿಲ್ಲ ಎಂದರು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕುರಿತು ಮಾತಾಡಿದ ವಿರೋಧ ಪಕ್ಷದ ನಾಯಕ, ಹೆದ್ದಾರಿಗೆ ಸರ್ವಿಸ್ ರಸ್ತೆ ಮತ್ತು ಬೈಪಾಸ್ ರೋಡ್ ಒದಗಿಸಿದ ಕಾರಣ ಟೋಲ್ ಪ್ಲಾಜಾ ನಲ್ಲಿ ಜಗಳಗಳು ನಡೆಯುತ್ತಿವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

 

Published on: Mar 14, 2023 02:56 PM