CM visits hospital: ಪತ್ನಿಯ ಆರೋಗ್ಯ ವಿಚಾರಿಸಲು ಬಂದ ಸಿಎಂ ಸಿದ್ದರಾಮಯ್ಯ ಚೆನ್ನಾಗಿದ್ದಾರೆ, ಸಮಸ್ಯೆಯಿಲ್ಲ ಎಂದಷ್ಟೇ ಹೇಳಿದರು
ವೈದ್ಯರ ಮಾಹಿತಿ ಪ್ರಕಾರ ಪಾರ್ವತಿಯವರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರಿಗೆ ಎಮ್ಐಸಿಯು ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ. ಅವರ ಆರೋಗ್ಯ ವಿಚಾರಿಸಲು ಸಿದ್ದರಾಮಯ್ಯ ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ವಾಪಸ್ಸು ಹೋಗುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಹೆಚ್ಚು ಮಾತಾಡಲಿಲ್ಲ. ಮೇಡಂ ಹೇಗಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಅವರು ‘ಚೆನ್ನಾಗಿದ್ದಾರೆ, ತೊಂದರೆಯಿಲ್ಲ’ ಅಂತಷ್ಟೇ ಹೇಳಿದರು. ನಂತರ ಮುಖ್ಯಮಂತ್ರಿ ತಮ್ಮ ಮಗ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಸ್ವಲ್ಪ ಹೊತ್ತು ಮಾತಾಡಿ ಅಲ್ಲಿಂದ ಹೊರಟರು. ಪಾರ್ವತಿ ಸಿದ್ದರಾಮಯ್ಯ ಅವರನ್ನು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ನೀಡಿರುವ ಮಾಹಿತಿ ಪ್ರಕಾರ ಪಾರ್ವತಿಯವರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರಿಗೆ ಎಮ್ಐಸಿಯು (ಮೆಡಿಕಲ್ ಇಂಟೆನ್ಸಿವ್ ಕೇರ್ ಯುನಿಟ್) ಚಿಕಿತ್ಸೆ ನೀಡಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ