Assembly Polls: ಅಭಿಮಾನಕ್ಕೆ ಧನ್ಯವಾದ, ಅದರೆ ಈ ಬಾರಿ ಕೋಲಾರದಿಂದಲೇ ಸ್ಪರ್ಧಿಸುತ್ತೇನೆ ಅಂತ ಚಾಮುಂಡೇಶ್ವರಿ ಕಾರ್ಯಕರ್ತರಿಗೆ ಹೇಳಿದ ಸಿದ್ದರಾಮಯ್ಯ

Updated on: Feb 02, 2023 | 7:04 PM

ಗಮನಿಸಬೇಕಾದ ಅಂಶವೇನೆಂದರೆ, ಸಿದ್ದರಾಮಯ್ಯ ತಮ್ಮ ನಿರ್ಧಾರ ಪ್ರಕಟಿಸಿದ್ದರೂ ಹೈಕಮಾಂಡ್ ಇದುವರೆಗೆ ಒಪ್ಪಿಗೆ ನೀಡಿಲ್ಲ. ಅವರ ಬೇಡಿಕೆಯನ್ನು ಹೈಕಮಾಂಡ್ ತಿರಸ್ಕರಿಸಲಾರದು ಬಿಡಿ.

ಬೆಂಗಳೂರು:  ಚಾಮುಂಡೇಶ್ವರಿಗೆ (Chamundeshwari) ವಾಪಸ್ಸು ಬನ್ನಿ, ಕಳೆದ ಬಾರಿಯಂತೆ ಆಗದು, ನಿಮ್ಮನ್ನು ಗೆಲ್ಲಿಸಿಯೇ ತೀರುತ್ತೇವೆ ಎಂದು ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ ಸಮಾರು 60 ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯನವರ (Siddaramaiah) ಮುಂದೆ ಎಷ್ಟೇ ಅವಲತ್ತುಕೊಂಡರೂ ವಿರೋಧ ಪಕ್ಷದ ನಾಯಕ ಮಾತ್ರ ತಮ್ಮ ನಿರ್ಧಾರ ಬದಲಿಸಲಿಲ್ಲ. ನೀವು 6 ಬಾರಿ ನನ್ನನ್ನು ಗೆಲ್ಲಿಸಿದ್ದೀರಿ, ಅದಕ್ಕಾಗಿ ಕೃತಜ್ಞತೆಯುಳ್ಳವನಾಗಿದ್ದೇನೆ. ಆದರೆ ಈ ಬಾರಿ ಕೋಲಾರದಿಂದ (Kolar) ಸ್ಪರ್ಧಿಸುವ ನಿರ್ಧಾರ ಮಾಡಿಕೊಂಡಿದ್ದೇನೆ, ನಿರ್ಧಾರವನ್ನು ಬದಲಿಲಾರೆ ಎಂದು ಕಾರ್ಯಕರ್ತರಿಗೆ ಹೇಳಿದರೆಂದು ಮೂಲಗಳಿಂದ ಗೊತ್ತಾಗಿದೆ. ಗಮನಿಸಬೇಕಾದ ಅಂಶವೇನೆಂದರೆ, ಸಿದ್ದರಾಮಯ್ಯ ತಮ್ಮ ನಿರ್ಧಾರ ಪ್ರಕಟಿಸಿದ್ದರೂ ಹೈಕಮಾಂಡ್ ಇದುವರೆಗೆ ಒಪ್ಪಿಗೆ ನೀಡಿಲ್ಲ. ಅವರ ಬೇಡಿಕೆಯನ್ನು ಹೈಕಮಾಂಡ್ ತಿರಸ್ಕರಿಸಲಾರದು ಬಿಡಿ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Feb 02, 2023 07:00 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More