Siddaramaiah: ಜಮೀರ್ ಪುತ್ರನ ‘ಬನಾರಸ್’ ನೋಡಿ ವಿಮರ್ಶೆ ತಿಳಿಸಿದ ಸಿದ್ದರಾಮಯ್ಯ; ಅವರಿಗೆ ಹೆಚ್ಚು ಇಷ್ಟ ಆಗಿದ್ದೇನು?
Banaras | Zaid Khan ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ‘ಬನಾರಸ್’ ಸಿನಿಮಾ ನೋಡಿದ್ದಾರೆ. ರಾಜಕಾರಣದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಅವರು ಚಿತ್ರ ವೀಕ್ಷಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ‘ಬನಾರಸ್’ ಸಿನಿಮಾ (Banaras) ನೋಡಿದ್ದಾರೆ. ಈ ಸಿನಿಮಾದಲ್ಲಿ ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ಹೀರೋ ಆಗಿ ನಟಿಸಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ‘ಮೊದಲ ಸಿನಿಮಾದಲ್ಲಿಯೇ ಅನುಭವಿ ಹೀರೋ ರೀತಿ ಝೈದ್ ಖಾನ್ (Zaid Khan) ನಟಿಸಿದ್ದಾರೆ. ಅವರ ಮತ್ತು ಸೋನಲ್ ಮಾಂಥೆರೋ ಜೋಡಿ ಚೆನ್ನಾಗಿದೆ. ಜಯತೀರ್ಥ ಬರೆದ ಕಥೆ ಕುತೂಹಲಕಾರಿ ಆಗಿದೆ. ಎಲ್ಲಿಯೂ ಬೋರ್ ಆಗಲ್ಲ’ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಇದರಲ್ಲಿನ ಸಸ್ಪೆನ್ಸ್ ಅಂಶವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 07, 2022 12:10 PM
Latest Videos