ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಸಿಎಂ ಭಾವುಕ: ಕಣ್ಣೀರು ಹಾಕಿದ ಸಿದ್ದರಾಮಯ್ಯ

Edited By:

Updated on: May 28, 2026 | 1:04 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ನಡೆದ ಉಪಹಾರ ಸಭೆಯಲ್ಲಿ ಕಣ್ಣೀರಿಟ್ಟಿದ್ದಾರೆ. ರಾಜೀನಾಮೆ ನಿರ್ಧಾರ ಮತ್ತು ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಕಟಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಭಾವುಕರಾಗಿದ್ದಾರೆ. ತಮ್ಮ ಉತ್ತಮ ಆಡಳಿತ ಮತ್ತು ಜನಪರ ಯೋಜನೆಗಳ ಬಗ್ಗೆ ತಿಳಿಸಿ, ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಸಹಕರಿಸುವಂತೆ ಸಚಿವರಿಗೆ ಕರೆ ನೀಡಿದ್ದಾರೆ.

ಬೆಂಗಳೂರು, ಮೇ 28: ಸಚಿವರೊಂದಿಗಿನ ಉಪಹಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಣ್ಣೀರಿಟ್ಟಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ವೇಳೆ ಸಿದ್ದರಾಮಯ್ಯ ಭಾವುಕರಾದ ಪ್ರಸಂಗ ನಡೆದಿದೆ. ಈ ಸಂದರ್ಭ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ ಜನಪರ ಯೋಜನೆಗಳು ಮತ್ತು ಉತ್ತಮ ಕಾರ್ಯಗಳನ್ನು ಸ್ಮರಿಸಿದ್ದು, ಮುಂಬರುವ ದಿನಗಳಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಸಹಕಾರ ನೀಡಿ. ಜನಪರ ಆಡಳಿತವನ್ನು ಮುಂದುವರಿಸಿ ಎಂದು ತಮ್ಮ ಸಚಿವ ಸಂಪುಟದ ಸದಸ್ಯರಿಗೆ ಕರೆ ನೀಡಿದ್ದಾರೆ. ಅಲ್ಲದೆ, ಬಿಜೆಪಿಯ ರಾಜಕಾರಣದ ಬಗ್ಗೆ ಎಚ್ಚರಿಕೆ ವಹಿಸುವಂತೆಯೂ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More