Siddaramaiah Lungi Leader: ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೀಬೇಡಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು
Pralhad Joshi: ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ.
ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ (Siddaramaiah) ಕೂಡ ಲುಂಗಿ ಲೀಡರ್ ( Lungi Leader) ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ ಆ ಲೆವೆಲ್ ಗೆ ಇಳಿದು ಮಾತಾಡಲ್ಲ. ಆದರೆ ಸಿದ್ದರಾಮಯ್ಯನವರೂ ಸಹ ಲುಂಗಿ ಲೀಡರ್ ಅನ್ನೋದನ್ನ ಕಾಂಗ್ರೆಸ್ ಪಕ್ಷ ಮರೆಯಬಾರದು. ನಾವೂ ಸಹ ಅದೇ ಭಾಷೆಯಲ್ಲಿ ಉತ್ತರ ಕೊಡಬಹುದು. ಆದರೆ ಆ ಲೆವೆಲ್ ಗೆ ಇಳಿಯಲ್ಲ ಎಂದರು.
ಚುವಾವಣೆಯ ಸಂದರ್ಭದಲ್ಲಿ ಬೇಷರತ್ ಎಂಬಂತೆ ಬಿಂಬಿಸಿ ಭಾಗ್ಯಗಳನ್ನು ಘೋಷಿಸಿದ @INCKarnataka ಇವತ್ತು ಉಲ್ಟಾ ಹೊಡೆಯುತ್ತಿದೆ. ಇದರಿಂದ ಕರ್ನಾಟಕದ ಜನತೆ ಕೂಡ ತೀರ್ವ ಅಸಮಾಧಾನಗೊಂಡಿದೆ. ಕಾಂಗ್ರೆಸ್ ಪಕ್ಷದ ಈ ದುರಹಂಕಾರ ಮತ್ತು ದುರಾಡಳಿತವನ್ನ ವಿರೋಧಿಸಿ ನಾವು ಜುಲೈ 4 ರಂದು ಪ್ರತಿಭಟನೆ ಮಾಡಲಿದ್ದೇವೆ. pic.twitter.com/gcQGMcsAjy
— Pralhad Joshi (@JoshiPralhad) July 1, 2023
ಕಾಂಗ್ರೆಸ್ ಪಕ್ಷ ಬಳಸಿರುವ ಪಂಚೆ ಭಾಷೆಗೆ ನನ್ನ ಬಳಿ ಉತ್ತರ ಇಲ್ಲ ಅಂತ ಅಲ್ಲ, ನನ್ನ ಬಾಯಲ್ಲಿ ಉತ್ತರ ಇದೆ, ಆದರೆ ಆ ರೀತಿಯ ಅಸಭ್ಯ ಭಾಷೆ ಬಳಸೋದು ಯಾವ ಕಾಲಕ್ಕೂ ಸರಿ ಅಲ್ಲ. ನೇರವಾಗಿ ರಾಜಕಾರಣದಲ್ಲಿ ಡೇ ಟು ಡೇ ಬೇಸಿಸ್ ನಲ್ಲಿ ಸಂಬಂಧವಿಟ್ಟುಕೊಳ್ಳದ, ಸಂಘಟನೆಯಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳ ಬಗ್ಗೆ ಈ ರೀತಿಯ ಭಾಷೆ ಬಳಸಿದ ಕಾಂಗ್ರೆಸ್ ಪಕ್ಷಕ್ಕೆ ಜನರೇ ಉತ್ತರ ಕೊಡ್ತಾರೆ. ಕಾಂಗ್ರೆಸ್ ಪಕ್ಷ ಇದನ್ನು ಇಲ್ಲಿಗೇ ನಿಲ್ಲಿಸಲಿ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದರು.