Siddaramaiah: ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗುತ್ತಿರುವುದಕ್ಕೆ ಸಹೋದರಿ ಮನೆಯಲ್ಲಿ ಹಬ್ಬದ ವಾತಾವರಣ!

ಅರುಣ್​ ಕುಮಾರ್​ ಬೆಳ್ಳಿ

Updated on: May 18, 2023 | 4:42 PM

ದೇವೇಗೌಡನಹುಂಡಿಯಲ್ಲಿ ಒಬ್ಬ ಸಹೋದರಿ ತಮ್ಮ ಮೂರು ಮಕ್ಕಳು ಹಾಗೂ ಮೊಮ್ಮಕ್ಕಳೊಂದಿಗೆ ವಾಸವಾಗಿದ್ದಾರೆ.

ಮೈಸೂರು: ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅಧಿಕಾರವಹಿಸಿಕೊಳ್ಳಲಿರುವ ಸಿದ್ದರಾಮಯ್ಯವರದ್ದು (Siddaramaiah) ದೊಡ್ಡ ಕುಟುಂಬ. ಟಿವಿ9 ಕನ್ನಡ ವಾಹಿನಿಯ ಮೈಸೂರು ವರದಿಗಾರ ನೀಡುತ್ತಿರುವ ಮಾಹಿತಿಯ ಪ್ರಕಾರ ಅವರಿಗೆ ಇಬ್ಬರು ಸಹೋದರಿಯರು (sisters) ಮತ್ತು ಮೂವರು ಸಹೋದರು. ದೇವೇಗೌಡನಹುಂಡಿಯಲ್ಲಿ (Devegowdanahundi) ಒಬ್ಬ ಸಹೋದರಿ ತಮ್ಮ ಮೂರು ಮಕ್ಕಳು ಹಾಗೂ ಮೊಮ್ಮಕ್ಕಳೊಂದಿಗೆ ವಾಸವಾಗಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುತ್ತಿರುವುದಕ್ಕೆ, ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದಕ್ಕೆ ಮತ್ತು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವುದಕ್ಕೆ ಅವರೆಲ್ಲ ಸಂತೋಷದ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಹೇಳುವುದನ್ನು ನೀವೇ ಕೇಳಿಸಿಕೊಳ್ಳಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.