AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಭವನದ ಆವರಣದಲ್ಲಿ ನೂತನ ಸಚಿವರ ಪದಗ್ರಹಣ: ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು

ಲೋಕಭವನದ ಆವರಣದಲ್ಲಿ ನೂತನ ಸಚಿವರ ಪದಗ್ರಹಣ: ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು

ಕಿರಣ್​ ಹನಿಯಡ್ಕ
| Edited By: |

Updated on: Aug 03, 2026 | 7:14 PM

Share

Ministers Oath-Taking Ceremony: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಗೈರು ಹಾಜರಾಗಿದ್ದಾರೆ. ಲೋಕಭವನದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ 19 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಎಂಎಲ್​​ಎಸಿ ಗಾಯಿತ್ರಿ ಶಾಂತೇಗೌಡ ಅವರು ಮಾತ್ರ ಹೈಕಮಾಂಡ್​​ ಲಿಸ್ಟ್​​ನಲ್ಲಿ ಹೆಸರಿದ್ದರೂ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.

ಬೆಂಗಳೂರು, ಆಗಸ್ಟ್​​ 03: ಕರ್ನಾಟಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್​​ಗಳ ಬಳಿಕ ಅಂತಿಮವಾಗಿ 19 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಈ ಪ್ರಮುಖ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಗೈರಾಗಿದ್ದಾರೆ. ಮಧ್ಯಾಹ್ನವೇ ತಮ್ಮ ಆಪ್ತರೊಂದಿಗೆ ಪ್ರಮಾಣ ವಚನ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂದು ಅವರು ಹೇಳಿದ್ದರಂತೆ. ಈ ಗೈರಿಗೆ ನಿಖರ ಕಾರಣ ಮಾತ್ರ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More