Assembly Polls: ಡಿಕೆ ಶಿವಕುಮಾರ್ ಗೈರು ಹಾಜರಿಯಲ್ಲಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆ ಆರಂಭಿಸಿದರು

|

Updated on: Feb 03, 2023 | 11:34 AM

ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ ಸದ್ಯಕ್ಕೆ ಬೆಂಗಳೂರಿನಲ್ಲಿದ್ದು ಸಿದ್ದರಾಮಯ್ಯನವರನ್ನು ಯಾವಾಗ ಸೇರಿಕೊಳ್ಳುತ್ತಾರೆ ಅನ್ನೋದು ಗೊತ್ತಾಗಿಲ್ಲ.

ಬೀದರ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕಲ್ಯಾಣ ಕರ್ನಾಟಕ (Kalyana Karnataka) ತಲುಪಿಯಾಗಿದೆ. ಇಂದಿನಿಂದ ಅಂದರೆ ಫೆಬ್ರುವರಿ 3 ರಿಂದ ಫೆಬ್ರುವರಿ 16 ರವರೆಗೆ ಅವರು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರಜಾಧ್ವನಿ ಯಾತ್ರೆ (Prajadhvani Yatre) ನಡೆಸಲಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸಿದ್ದರಾಮಯ್ಯ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಯಾತ್ರೆ ಆರಂಭಿಸಿ ಪ್ರತಿದಿನ 2-3 ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ ಸದ್ಯಕ್ಕೆ ಬೆಂಗಳೂರಿನಲ್ಲಿದ್ದು ಸಿದ್ದರಾಮಯ್ಯನವರನ್ನು ಯಾವಾಗ ಸೇರಿಕೊಳ್ಳುತ್ತಾರೆ ಅನ್ನೋದು ಗೊತ್ತಾಗಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 03, 2023 11:33 AM