ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ನಗರ ಪಾಲಿಕೆಯಿಂದ ತೆರವು

Edited By:

Updated on: Sep 17, 2026 | 11:02 AM

ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ರಾತ್ರೋರಾತ್ರಿ ಅನುಮತಿಯಿಲ್ಲದೆ ಪ್ರತಿಷ್ಠಾಪಿಸಿದ್ದ 9 ಅಡಿ ಎತ್ತರದ ಮೂರ್ತಿಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ್ದಾರೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆ ಈ ಕಠಿಣ ಕ್ರಮ ಕೈಗೊಂಡಿದೆ.

ಕಲಬುರಗಿ, ಸೆಪ್ಟೆಂಬರ್ 17: ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನಗರದಲ್ಲಿ ವಾಸ್ತವ್ಯ ಹೂಡಿದ್ದ ವೇಳೆಯಲ್ಲೇ, ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಮೂರ್ತಿಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದರು. ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ ಈ ಪ್ರತಿಮೆ ಸ್ಥಾಪಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆ ಈ ಕಠಿಣ ಕ್ರಮ ಕೈಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 17, 2026 11:01 AM
Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More