AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಪ್ರಕರಣ: ಖಾಸಗಿ ಮಾಧ್ಯಮದ ಪತ್ರಕರ್ತ, ಮತ್ತೊಬ್ಬರು ಬಂದಿದ್ದರು, ಅವರು ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ

ಸ್ಟಿಂಗ್ ಪ್ರಕರಣ: ಖಾಸಗಿ ಮಾಧ್ಯಮದ ಪತ್ರಕರ್ತ, ಮತ್ತೊಬ್ಬರು ಬಂದಿದ್ದರು, ಅವರು ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ

ಶಿವಪ್ರಸಾದ್​ ಬಿ.
| Edited By: |

Updated on: Nov 12, 2026 | 11:11 AM

Share

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದ ವಿಚಾರಣೆಗೆ ಪದೇಪದೇ ಕರೆಸುತ್ತಿರುವುದಕ್ಕೆ ಕೃಪಾ ಆಳ್ವ ಸಿಸಿಬಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನಿಖೆಯ ಉದ್ದೇಶ ಸ್ಪಷ್ಟಪಡಿಸುವಂತೆ ಆಗ್ರಹಿಸಿರುವ ಅವರು, ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ತನ್ನ ತಪ್ಪಿಲ್ಲ ಎಂದು ಆಳ್ವ ಹೇಳಿದ್ದಾರೆ.

ಬೆಂಗಳೂರು, ನವೆಂಬರ್ 12: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆಯ ವೇಳೆ ಕೃಪಾ ಆಳ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇಪದೇ ವಿಚಾರಣೆಗೆ ಕರೆಸುತ್ತಿರುವುದಕ್ಕೆ ಸಿಸಿಬಿ ತನಿಖಾಧಿಕಾರಿ ರವಿ ವಿರುದ್ಧ ಅವರು ಗರಂ ಆಗಿದ್ದಾರೆ. ಕೃಪಾ ಆಳ್ವ ಅವರಿಗೆ ಮೂರು ಬಾರಿ ಹೇಳಿಕೆ ದಾಖಲಿಸಿದ ನಂತರವೂ ಮತ್ತೆ ಬರುವಂತೆ ಸೂಚನೆ ನೀಡಲಾಗಿದ್ದು, ಇದು ಅವರ ಸಿಟ್ಟಿಗೆ ಕಾರಣವಾಗಿದೆ. ‘‘ಎಷ್ಟು ಬಾರಿ ಹೇಳಿಕೆ ದಾಖಲಿಸಬೇಕು? ನನ್ನದು ಯಾವುದೇ ತಪ್ಪಿಲ್ಲ, ಆದರೂ ಪದೇಪದೇ ಕರೆಸಿ ಕಿರುಕುಳ ನೀಡುತ್ತಿದ್ದೀರಿ’’ ಎಂದು ಅವರು ಪ್ರಶ್ನಿಸಿದ್ದಾರೆ. ತನಿಖೆ ಯಾವ ಉದ್ದೇಶದಿಂದ ಕೂಡಿದೆ ಎಂಬುದನ್ನು ಸ್ಪಷ್ಟಪಡಿಸುವಂತೆ ಕೃಪಾ ಆಳ್ವ ಅವರು ಅಧಿಕಾರಿಗಳಿಗೆ ಕೇಳಿದ್ದಾರೆ.

ಈ ಹಿಂದೆ ಕೃಪಾ ಆಳ್ವಾಗೆ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ನಂತರ ಅವರು ವಿಚಾರಣೆಗೆ ಹಾಜರಾಗಿದ್ದರು. ಅವರ ಪಾತ್ರ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ತಿಳಿದಿರುವ ಮಾಹಿತಿ ಕಲೆಹಾಕಲು ಸಿಸಿಬಿ ವಿಚಾರಣೆ ನಡೆಸುತ್ತಿದೆ. ಆದರೆ ನಿರಂತರ ವಿಚಾರಣೆಯಿಂದ ಕೃಪಾ ಆಳ್ವ ತೀವ್ರ ಅಸಮಾಧಾನಗೊಂಡಿದ್ದಾರೆ.

ಈಮಧ್ಯೆ, ‘ನನ್ನ ಜೊತೆ ಖಾಸಗಿ ಮಾಧ್ಯಮದ ಪತ್ರಕರ್ತ ಹಾಗೂ ಮತ್ತೊಬ್ಬರು ಬಂದಿದ್ದರು. ಅವರು ವಿಡಿಯೋ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ’ ಎಂದೂ ಕೃಪಾ ಆಳ್ವ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More