ಸ್ಟಿಂಗ್ ಆಪರೇಷನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಸಮೇತ ಇಂದು ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೂರ್ವ ನಿಯೋಜಿತ ಟ್ರಿಪ್ ಹಿನ್ನೆಲೆ ವಿದೇಶಕ್ಕೆ ತೆರಳಿದ್ದ ಕೃಪಾಆಳ್ವಾ, ನ.7ರಂದು ರಾತ್ರಿ ಕೆಂಪೇಗೌಡ ಏರ್ಪೋರ್ಟ್ಗೆ ವಾಪಸ್ ಆಗಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಬೆಂಗಳೂರು, ನವೆಂಬರ್ 09: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕೇಸ್ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್ ನೀಡಿದೆ. ಮೊಬೈಲ್, ಲ್ಯಾಪ್‌ಟಾಪ್ ಸಮೇತ ಹಾಜರಾಗುವಂತೆ ಸೂಚಿಸಲಾಗಿದೆ. ಪೂರ್ವ ನಿಯೋಜಿತ ಟ್ರಿಪ್ ಹಿನ್ನೆಲೆ ವಿದೇಶಕ್ಕೆ ತೆರಳಿದ್ದ ಕೃಪಾಆಳ್ವಾ, ನ.7ರಂದು ರಾತ್ರಿ ಕೆಂಪೇಗೌಡ ಏರ್ಪೋರ್ಟ್ಗೆ ವಾಪಸ್ ಆಗಿದ್ದಾರೆ. ಮೊದಲೇ ಕೃಪಾ ಆಳ್ವಾ ವಿರುದ್ಧ ಸಿಸಿಬಿ ಟೀಂ LOC ಜಾರಿ ಮಾಡಿದ್ದ ಹಿನ್ನೆಲೆ ಏರ್ಪೋರ್ಟ್ ಎಮಿಗ್ರೇಷನ್ ಅಧಿಕಾರಿಗ ಅವರನ್ನುಳು ವಶಕ್ಕೆ ಪಡೆದಿದ್ದರು. ಬಳಿಕ ಸಿಸಿಬಿ ಸೈಬರ್ ಇನ್ಸ್ಪೆಕ್ಟರ್ ಸತೀಶ್ ವಶಕ್ಕೆ ನೀಡಲಾಗಿತ್ತು. ಮಧ್ಯಂತರ ಜಾಮೀನು ಪಡೆದಿದ್ದರಿಂದ ಬಂಧನ ಮಾಡಿರಲಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us




