ಸ್ಟಿಂಗ್ ಆಪರೇಷನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಸಮೇತ ಇಂದು ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೂರ್ವ ನಿಯೋಜಿತ ಟ್ರಿಪ್ ಹಿನ್ನೆಲೆ ವಿದೇಶಕ್ಕೆ ತೆರಳಿದ್ದ ಕೃಪಾಆಳ್ವಾ, ನ.7ರಂದು ರಾತ್ರಿ ಕೆಂಪೇಗೌಡ ಏರ್​ಪೋರ್ಟ್​ಗೆ ವಾಪಸ್​​ ಆಗಿದ್ದಾರೆ.

ಸ್ಟಿಂಗ್ ಆಪರೇಷನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
Edited By:

Updated on: Nov 09, 2026 | 10:15 AM

ಬೆಂಗಳೂರು, ನವೆಂಬರ್​​ 09: ಮಾಜಿ ಸಿಎಂ‌ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕೇಸ್ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್​ ನೀಡಿದೆ. ಮೊಬೈಲ್, ಲ್ಯಾಪ್​ಟಾಪ್ ಸಮೇತ ಹಾಜರಾಗುವಂತೆ ಸೂಚಿಸಲಾಗಿದೆ. ಪೂರ್ವ ನಿಯೋಜಿತ ಟ್ರಿಪ್ ಹಿನ್ನೆಲೆ ವಿದೇಶಕ್ಕೆ ತೆರಳಿದ್ದ ಕೃಪಾಆಳ್ವಾ, ನ.7ರಂದು ರಾತ್ರಿ ಕೆಂಪೇಗೌಡ ಏರ್​ಪೋರ್ಟ್​ಗೆ ವಾಪಸ್​​ ಆಗಿದ್ದಾರೆ. ಮೊದಲೇ ಕೃಪಾ ಆಳ್ವಾ ವಿರುದ್ಧ ಸಿಸಿಬಿ ಟೀಂ LOC ಜಾರಿ ಮಾಡಿದ್ದ ಹಿನ್ನೆಲೆ ಏರ್​ಪೋರ್ಟ್ ಎಮಿಗ್ರೇಷನ್ ಅಧಿಕಾರಿಗ ಅವರನ್ನುಳು ವಶಕ್ಕೆ ಪಡೆದಿದ್ದರು. ಬಳಿಕ ಸಿಸಿಬಿ ಸೈಬರ್ ಇನ್ಸ್​ಪೆಕ್ಟರ್ ಸತೀಶ್ ವಶಕ್ಕೆ ನೀಡಲಾಗಿತ್ತು. ಮಧ್ಯಂತರ ಜಾಮೀನು ಪಡೆದಿದ್ದರಿಂದ ಬಂಧನ ಮಾಡಿರಲಿಲ್ಲ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
Loading...
Unable to load recommendations.
Follow Us