AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಷಡ್ಯಂತ್ರ ಕೇಸ್: ಕೃಪಾ‌ ಆಳ್ವಾ ಬಂಧನ ಭೀತಿಯಿಂದ ವಿದೇಶಕ್ಕೆ ತೆರಳಿರುವ ಶಂಕೆ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಷಡ್ಯಂತ್ರ ಕೇಸ್: ಕೃಪಾ‌ ಆಳ್ವಾ ಬಂಧನ ಭೀತಿಯಿಂದ ವಿದೇಶಕ್ಕೆ ತೆರಳಿರುವ ಶಂಕೆ

ಪ್ರಸನ್ನ ಗಾಂವ್ಕರ್​
| Edited By: |

Updated on: Oct 29, 2026 | 12:52 PM

Share

ಸಿದ್ದರಾಮಯ್ಯ ಸ್ಟಿಂಗ್ ಕಾರ್ಯಾಚರಣೆ ವಿವಾದಕ್ಕೆ ಸಂಬಂಧಿಸಿದಂತೆ ಕ್ರಮದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಅಮೆರಿಕಾಕ್ಕೆ ತೆರಳಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನೋಟಿಸ್ ನೀಡುವ ಮೊದಲೇ ತನಿಖೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದ ಅವರು, ಬಂಧನದ ಭೀತಿಯಿಂದ ಜಪಾನ್ ಮೂಲಕ ಅಮೆರಿಕಾಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಠಾತ್ ನಿರ್ಗಮನವು ಹಲವು ಸಂಶಯಗಳಿಗೆ ಕಾರಣವಾಗಿದೆ.

ಬೆಂಗಳೂರು, ಅಕ್ಟೋಬರ್ 29: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಕಾರ್ಯಾಚರಣೆ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಅಮೆರಿಕಾಕ್ಕೆ ತೆರಳಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಬಂಧನ ಭೀತಿಯಿಂದ ಅವರು ಜಪಾನ್ ಮೂಲಕ ಅಮೆರಿಕಾಕ್ಕೆ ತೆರಳಿರಬಹುದು ಎಂಬ ಸಂಶಯಗಳು ವ್ಯಕ್ತವಾಗಿವೆ. ಕೃಪಾ ಆಳ್ವ ಅವರಿಗೆ ನೋಟಿಸ್ ನೀಡುವ ಮೊದಲೇ, ಸ್ವಯಂಪ್ರೇರಿತವಾಗಿ ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ವಿಚಾರಣೆಯ ವೇಳೆ, ಪೊಲೀಸರು ಅವರನ್ನು ಮುಂದಿನ ವಿಚಾರಣೆಗಳಿಗೆ ಹಾಜರಾಗುವಂತೆ ಸೂಚಿಸಿದ್ದರು. ಅನುಮತಿಯಿಲ್ಲದೆ ದೇಶದಿಂದ ಹೊರಗೆ ಹೋಗಬಾರದು ಎಂದೂ ತಿಳಿಸಲಾಗಿತ್ತು. ಆದರೂ, ಅವರು ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸದೆ ಹಠಾತ್ತಾಗಿ ಜಪಾನ್‌ಗೆ ತೆರಳಿ ಅಲ್ಲಿಂದ ಅಮೆರಿಕಾಕ್ಕೆ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ತನಿಖೆ ನಡೆಯುತ್ತಿರುವಾಗಲೇ ಕೃಪಾ ಆಳ್ವ ಅವರ ಈ ವಿದೇಶ ಪ್ರಯಾಣದ ಶಂಕೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಕೆಪಿಸಿಸಿ ಸೂಚಿಸಿದ್ದರೂ ಕೃಪಾ ಆಳ್ವ ಅವರಿಗೆ ಇದುವರೆಗೆ ನೋಟಿಸ್ ಜಾರಿ ಮಾಡಿಲ್ಲ. ಈ ಬೆಳವಣಿಗೆಯು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More