ವರುಣಾ ಜನರ ಕುರಿತು ಭಾವನಾತ್ಮಕ ಮಾತು: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪ್ರಸಂಗ ಬಿಚ್ಚಿಟ್ಟ ಸಿದ್ದರಾಮಯ್ಯ

Edited By:

Updated on: Oct 05, 2026 | 4:39 PM

ನಾನು‌ ರಾಜ್ಯದಲ್ಲಿ ಎಂಟು ವರ್ಷ ಕಾಲ ಮುಖ್ಯಮಂತ್ರಿ ಆಗಿದ್ದೆ. ರಾಹುಲ್ ಗಾಂಧಿ ಯಾವಾಗ ಹೇಳುತ್ತಾರೆ ಅವತ್ತೆ ಸಿಎಂ ಸ್ಥಾನ ಬಿಡುತ್ತೇನೆ ಎಂದು ನಾಲ್ಕೈದು ಬಾರಿ ಹೇಳಿದ್ದೆ. ನಾನು ಹೇಳಿದಂತೆ ನಡೆದುಕೊಂಡಿದ್ದೇನೆ ಎಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಸಂಗವನ್ನ ವಿವರಿಸಿದರು. ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ದಾಸನೂರು ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ. ನನಗೆ ಅಧಿಕಾರ ಇರಲಿ ಇಲ್ಲದೆ ಇರಲಿ. ನಿಮ್ಮ ಸೇವೆಯನ್ನು ಸದಾ ಮಾಡ್ತೀನಿ. ನಿಮ್ಮನ್ನು ಯಾವುದೇ ಕಾರಣಕ್ಕೂ ಮರೆಯಲ್ಲ. 40 ವರ್ಷಕ್ಕೆ ಹೆಚ್ಚು ಕಾಲ ರಾಜಕೀಯದಲ್ಲಿದ್ದೇನೆ. ಇಷ್ಟೊಂದು ಕಾಲ ಇರಬೇಕಾದರೆ ನಿಮ್ಮ ಆಶೀರ್ವಾದವೇ ಕಾರಣ. ಅದಕ್ಕಾಗಿ 8 ಬಾರಿ ಗೆದ್ದಿದ್ದೇನೆ ಎಂದು ವರುಣಾ ಜನರ ಕುರಿತು ಭಾವನಾತ್ಮಕವಾಗಿ ಮಾತನಾಡಿದರು.

ಮೈಸೂರು,(ಅಕ್ಟೋಬರ್ 05): ನಾನು‌ ರಾಜ್ಯದಲ್ಲಿ ಎಂಟು ವರ್ಷ ಕಾಲ ಮುಖ್ಯಮಂತ್ರಿ ಆಗಿದ್ದೆ. ರಾಹುಲ್ ಗಾಂಧಿ ಯಾವಾಗ ಹೇಳುತ್ತಾರೆ ಅವತ್ತೆ ಸಿಎಂ ಸ್ಥಾನ ಬಿಡುತ್ತೇನೆ ಎಂದು ನಾಲ್ಕೈದು ಬಾರಿ ಹೇಳಿದ್ದೆ. ನಾನು ಹೇಳಿದಂತೆ ನಡೆದುಕೊಂಡಿದ್ದೇನೆ ಎಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಸಂಗವನ್ನ ವಿವರಿಸಿದರು. ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ದಾಸನೂರು ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ. ನನಗೆ ಅಧಿಕಾರ ಇರಲಿ ಇಲ್ಲದೆ ಇರಲಿ. ನಿಮ್ಮ ಸೇವೆಯನ್ನು ಸದಾ ಮಾಡ್ತೀನಿ. ನಿಮ್ಮನ್ನು ಯಾವುದೇ ಕಾರಣಕ್ಕೂ ಮರೆಯಲ್ಲ. 40 ವರ್ಷಕ್ಕೆ ಹೆಚ್ಚು ಕಾಲ ರಾಜಕೀಯದಲ್ಲಿದ್ದೇನೆ. ಇಷ್ಟೊಂದು ಕಾಲ ಇರಬೇಕಾದರೆ ನಿಮ್ಮ ಆಶೀರ್ವಾದವೇ ಕಾರಣ. ಅದಕ್ಕಾಗಿ 8 ಬಾರಿ ಗೆದ್ದಿದ್ದೇನೆ ಎಂದು ವರುಣಾ ಜನರ ಕುರಿತು ಭಾವನಾತ್ಮಕವಾಗಿ ಮಾತನಾಡಿದರು.

ನಾಲ್ಕು ಅವಧಿಯಲ್ಲಿ 5 ಸಾವಿರ ಕೋಟಿ ರೂ. ಹೆಚ್ಚು ಅಭಿವೃದ್ಧಿ ಕೆಲಸ ವರುಣ ಕ್ಷೇತ್ರಕ್ಕೆ ಮಾಡಿದ್ದೇನೆ. ನನ್ನ ಕೆಲಸದಿಂದ ನನಗೆ ತೃಪ್ತಿಯಿದೆ. ಬಡವರ ಕೆಲಸವನ್ನು ಮಾಡುವ ಪ್ರಯತ್ನ ಮಾಡಿದ್ದೇನೆ. ಈಗ ಡಿಕೆಶಿ ಸಿಎಂ ಆಗಿದ್ದಾರೆ. ನಮ್ಮೆಲ್ಲ ಕಾರ್ಯಕ್ರಮಗಳನ್ನು ಅವರು ಮುಂದುವರೆಸುವ ವಿಶ್ವಾಸವಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More