AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್ ಅಂಗಳಕ್ಕೆ ಸ್ಟಿಂಗ್ ಆಪರೇಷನ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯ

ಹೈಕಮಾಂಡ್ ಅಂಗಳಕ್ಕೆ ಸ್ಟಿಂಗ್ ಆಪರೇಷನ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯ

ಪ್ರಸನ್ನ ಗಾಂವ್ಕರ್​
| Edited By: |

Updated on: Oct 27, 2026 | 6:01 PM

Share

ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತನಿಖೆಯ ಬಗ್ಗೆ ತೃಪ್ತಿ, ಅತೃಪ್ತಿ ಅಂತಾ ಇಲ್ಲ. ಸ್ಟಿಂಗ್​ ಆಪರೇಷನ್​ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ಒತ್ತಾಯ ಮಾಡ್ತೇನೆ. ಈಗಾಗಲೇ ಕೆ.ಸಿ.ವೇಣುಗೋಪಾಲ್​ ಗಮನಕ್ಕೆ ತಂದಿದ್ದೇನೆ ರಾಹುಲ್ ಗಾಂಧಿ ಗಮನಕ್ಕೂ ವಿಷಯ ಹೋಗಿದೆ. ವೇಣುಗೋಪಾಲ್​ ಅವರು ರಾಹುಲ್ ಗಮನಕ್ಕೆ ತಂದಿದ್ದಾರೆ. ದೆಹಲಿಗೆ ಹೋದಾಗ ಸಮಯ ಕೊಟ್ಟರೆ ಭೇಟಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, ಅಕ್ಟೋಬರ್ 27): ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಅಪರೇಷನ್ ಕೋಲಾಹಲವನ್ನೇ ಎಬ್ಬಿಸಿದೆ. ಈ ಸ್ಟಿಂಗ್ ಮಾಡಿದ್ಯಾರು ಎನ್ನುವುದನ್ನು ಸ್ವತಃ ದೂರುದಾರ, ಮಾಜಿ ಸಿಎಂ ಸಿದ್ದರಾಮಯ್ಯ, ಮಂಗಳೂರು ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಹಾಗೂ ಪತ್ರಕರ್ತರೊಬ್ಬರ ಹೆಸರು ಬಹಿರಂಗಪಡಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಕೋಲಾಹಲ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ಪ್ರಕರಣದ ಸಂಬಂಧ ಮಾಹಿತಿ ಸಹ ಪಡೆದುಕೊಂಡಿದೆ. ಈ ಸಂಬಂಧ ಹೈಕಮಾಂಡ್ ಸಮಯ ನೀಡಿದರೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗುವೆ ಎಂದು ಪ್ರಕರಣದ ದೂರುದಾರ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತನಿಖೆಯ ಬಗ್ಗೆ ತೃಪ್ತಿ, ಅತೃಪ್ತಿ ಅಂತಾ ಇಲ್ಲ. ಸ್ಟಿಂಗ್​ ಆಪರೇಷನ್​ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ಒತ್ತಾಯ ಮಾಡ್ತೇನೆ. ಈಗಾಗಲೇ ಕೆ.ಸಿ.ವೇಣುಗೋಪಾಲ್​ ಗಮನಕ್ಕೆ ತಂದಿದ್ದೇನೆ ರಾಹುಲ್ ಗಾಂಧಿ ಗಮನಕ್ಕೂ ವಿಷಯ ಹೋಗಿದೆ. ವೇಣುಗೋಪಾಲ್​ ಅವರು ರಾಹುಲ್ ಗಮನಕ್ಕೆ ತಂದಿದ್ದಾರೆ. ದೆಹಲಿಗೆ ಹೋದಾಗ ಸಮಯ ಕೊಟ್ಟರೆ ಭೇಟಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More