ಹೈಕಮಾಂಡ್ ಅಂಗಳಕ್ಕೆ ಸ್ಟಿಂಗ್ ಆಪರೇಷನ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತನಿಖೆಯ ಬಗ್ಗೆ ತೃಪ್ತಿ, ಅತೃಪ್ತಿ ಅಂತಾ ಇಲ್ಲ. ಸ್ಟಿಂಗ್ ಆಪರೇಷನ್ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ಒತ್ತಾಯ ಮಾಡ್ತೇನೆ. ಈಗಾಗಲೇ ಕೆ.ಸಿ.ವೇಣುಗೋಪಾಲ್ ಗಮನಕ್ಕೆ ತಂದಿದ್ದೇನೆ ರಾಹುಲ್ ಗಾಂಧಿ ಗಮನಕ್ಕೂ ವಿಷಯ ಹೋಗಿದೆ. ವೇಣುಗೋಪಾಲ್ ಅವರು ರಾಹುಲ್ ಗಮನಕ್ಕೆ ತಂದಿದ್ದಾರೆ. ದೆಹಲಿಗೆ ಹೋದಾಗ ಸಮಯ ಕೊಟ್ಟರೆ ಭೇಟಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು, ಅಕ್ಟೋಬರ್ 27): ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಅಪರೇಷನ್ ಕೋಲಾಹಲವನ್ನೇ ಎಬ್ಬಿಸಿದೆ. ಈ ಸ್ಟಿಂಗ್ ಮಾಡಿದ್ಯಾರು ಎನ್ನುವುದನ್ನು ಸ್ವತಃ ದೂರುದಾರ, ಮಾಜಿ ಸಿಎಂ ಸಿದ್ದರಾಮಯ್ಯ, ಮಂಗಳೂರು ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಹಾಗೂ ಪತ್ರಕರ್ತರೊಬ್ಬರ ಹೆಸರು ಬಹಿರಂಗಪಡಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಕೋಲಾಹಲ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ಪ್ರಕರಣದ ಸಂಬಂಧ ಮಾಹಿತಿ ಸಹ ಪಡೆದುಕೊಂಡಿದೆ. ಈ ಸಂಬಂಧ ಹೈಕಮಾಂಡ್ ಸಮಯ ನೀಡಿದರೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗುವೆ ಎಂದು ಪ್ರಕರಣದ ದೂರುದಾರ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತನಿಖೆಯ ಬಗ್ಗೆ ತೃಪ್ತಿ, ಅತೃಪ್ತಿ ಅಂತಾ ಇಲ್ಲ. ಸ್ಟಿಂಗ್ ಆಪರೇಷನ್ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ಒತ್ತಾಯ ಮಾಡ್ತೇನೆ. ಈಗಾಗಲೇ ಕೆ.ಸಿ.ವೇಣುಗೋಪಾಲ್ ಗಮನಕ್ಕೆ ತಂದಿದ್ದೇನೆ ರಾಹುಲ್ ಗಾಂಧಿ ಗಮನಕ್ಕೂ ವಿಷಯ ಹೋಗಿದೆ. ವೇಣುಗೋಪಾಲ್ ಅವರು ರಾಹುಲ್ ಗಮನಕ್ಕೆ ತಂದಿದ್ದಾರೆ. ದೆಹಲಿಗೆ ಹೋದಾಗ ಸಮಯ ಕೊಟ್ಟರೆ ಭೇಟಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ

