ವೀರ ಮಕ್ಕಳ ಕುಣಿತಕ್ಕೆ ಸಿಎಂ ಹೆಜ್ಜೆ, ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಹೇಳಿದ್ದಿಷ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರ ಮಕ್ಕಳ ಕುಣಿತಕ್ಕೆ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಇನ್ನು ವಿಡಿಯೋವನ್ನು ಸ್ವತಃ ಸಿದ್ದರಾಮಯ್ಯನವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಬೆಂಗಳೂರು/ವಿಜಯನಗರ, (ನವೆಂಬರ್ 03): ಹಂಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ‘ಕರ್ನಾಟಕ ಸಂಭ್ರಮ-50’ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರ ಮಕ್ಕಳ ಕುಣಿತಕ್ಕೆ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಇನ್ನು ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ-50 ರ ಉದ್ಘಾಟನಾ ಸಮಾರಂಭದಲ್ಲಿ ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಮೈಮನ ಹಗುರಾಗಿಸಿತು. ಬಾಲ್ಯದಲ್ಲಿ ಕಲಿತ ವಿದ್ಯೆ ಬದುಕಿನುದ್ದಕ್ಕೂ ನೆನಪಿನಲ್ಲುಳಿಯುತ್ತಂತೆ. ಹೆಜ್ಜೆ ಹಾಕುತ್ತಾ ಹಾಕುತ್ತಾ ನನ್ನೂರ ಗೆಳೆಯರೊಡನೆ ಕುಣಿಯುತ್ತಿದ್ದ ಬಾಲ್ಯದ ದಿನಗಳು ನೆನಪಾದವು ಎಂದು ಬರೆದುಕೊಂಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ