ಸಿದ್ದರಾಮಯ್ಯ ಬಣದಿಂದ ಡಿಕೆ ಶಿವಕುಮಾರ್ ವಿರುದ್ಧ ಹೊಸ ದಾಳ
ಸಿದ್ದರಾಮಯ್ಯ ಬಣದಿಂದ ಎಐಸಿಸಿ ಪತ್ರಿಕಾ ಪ್ರಕಟಣೆಯ ದಾಳ ಉರುಳಿಸಲಾಗಿದೆ. 2023ರ ಮೇ 18ರಂದು ಕರ್ನಾಟಕದ ಸಿಎಂ -ಡಿಸಿಎಂ ನಿಯೋಜನೆಗೊಂಡ ವೇಳೆ ಬಿಡುಗಡೆ ಮಾಡಿದ್ದ ಪ್ರೆಸ್ ನೋಟ್ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಆಗ ಬಿಡುಗಡೆ ಮಾಡಲಾಗಿದ್ದ ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮುಂದಿನ ಲೋಕಸಭಾ ಚುನಾವಣೆವರೆಗೆ ಮಾತ್ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿತ್ತು. ಆದರೆ, ಡಿಕೆ ಶಿವಕುಮಾರ್ 2024ರ ಲೋಕಸಭೆ ಚುನಾವಣೆ ಬಳಿಕವೂ ಅಧ್ಯಕ್ಷರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಪ್ರಶ್ನೆ ಮಾಡಿದ್ದಾರೆ. ಡಿಸಿಎಂ ಅವಧಿ ಮುಗಿದ ಬಳಿಕವೂ ಕೆಪಿಸಿಸಿ ಅಧ್ಯಕ್ಷರಾಗಿಲ್ಲವೇ? ಎಂದು ಬಹಿರಂಗವಾಗಿಯೇ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿದ್ದಾರೆ. ಇದು ಮತ್ತೆ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು, ನವೆಂಬರ್ 22:ಕರ್ನಾಟಕದಲ್ಲಿ ಅಧಿಕಾರದ ಹಗ್ಗಜಗ್ಗಾಟ ಜೋರಾಗಿದೆ. ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣದವರು ಪರಸ್ಪರ ಕೆಸರೆರಚಾಟ ಶುರು ಮಾಡಿದ್ದಾರೆ. ಇದೀಗ ಸಿದ್ದರಾಮಯ್ಯ (Siddaramaiah) ಬಣದಿಂದ ಎಐಸಿಸಿ ಪತ್ರಿಕಾ ಪ್ರಕಟಣೆಯ ದಾಳ ಉರುಳಿಸಲಾಗಿದೆ. 2023ರ ಮೇ 18ರಂದು ಕರ್ನಾಟಕದ ಸಿಎಂ -ಡಿಸಿಎಂ ನಿಯೋಜನೆಗೊಂಡ ವೇಳೆ ಬಿಡುಗಡೆ ಮಾಡಿದ್ದ ಪ್ರೆಸ್ ನೋಟ್ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಆಗ ಬಿಡುಗಡೆ ಮಾಡಲಾಗಿದ್ದ ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮುಂದಿನ ಲೋಕಸಭಾ ಚುನಾವಣೆವರೆಗೆ ಮಾತ್ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿತ್ತು. ಆದರೆ, ಡಿಕೆ ಶಿವಕುಮಾರ್ 2024ರ ಲೋಕಸಭೆ ಚುನಾವಣೆ ಬಳಿಕವೂ ಅಧ್ಯಕ್ಷರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಪ್ರಶ್ನೆ ಮಾಡಿದ್ದಾರೆ. ಡಿಸಿಎಂ ಅವಧಿ ಮುಗಿದ ಬಳಿಕವೂ ಕೆಪಿಸಿಸಿ ಅಧ್ಯಕ್ಷರಾಗಿಲ್ಲವೇ? ಎಂದು ಬಹಿರಂಗವಾಗಿಯೇ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿದ್ದಾರೆ. ಇದು ಮತ್ತೆ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
