Siddaramaiah: ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ

Siddaramaiah: ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on:May 20, 2023 | 1:50 PM

ವಿಚಾರವಾದಿಯಾಗಿರುವ ಅವರು ಯಾರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿತ್ತು.

ಬೆಂಗಳೂರು: ಹಲವಾರು ಕಸರತ್ತು, ಹಗ್ಗ-ಜಗ್ಗಾಟ, ಆತಂಕ ಮತ್ತು ದುಗುಡಗಳ ಬಳಿಕ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ (chief minister) ಸಿದ್ದರಾಮಯ್ಯನವರು (Siddaramaiah) ಪ್ರಮಾಣ ವಚನ ಸ್ವೀಕರಿಸಿದರು. ವಿಚಾರವಾದಿಯಾಗಿರುವ (rationalist) ಅವರು ಯಾರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿತ್ತು. ಸಿದ್ದರಾಮಯ್ಯನವರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಂದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ನಟ ಕಮಲ್​ ಹಾಸನ್, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಮೊದಲಾದವರು ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 20, 2023 01:25 PM