ಕುರಿಮರಿ ಕೊಡಲು ಬಂದವರು ಸಿದ್ಧರಾಮಯ್ಯ ಮೇಲೆ ಬಿದ್ದೇ ಬಿಟ್ರು: ವಿಡಿಯೋ ನೋಡಿ

Updated on: May 01, 2023 | 6:53 PM

ಮಾಜಿ ಸಿಎಂ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ.

ತುಮಕೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಕ್ಷೇತ್ರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆ ಹಿನ್ನೆಲೆ ಇಂದು ಜಿಲ್ಲೆಯ ಪಾವಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಪರ‌ ಸಿದ್ದರಾಮಯ್ಯ ಮತಯಾಚನೆ ಮಾಡಿದರು. ಬಳಿಕ ಪಾವಗಡದ ಚಳ್ಳಕೆರೆ ಕ್ರಾಸ್​ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಯಿತು. ಈ ವೇಳೆ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 01, 2023 06:53 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More