ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕ್ರಮವನ್ನು ವಿರೋಧಿಸಿದ್ದಾರೆ. ಒಂದು ವೇಳೆ ರಾಜ್ಯಪಾಲರು ಈ ಕಾನೂನಿಗೆ ಸಹಿ ಹಾಕಿದರೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯಪಾಲರಿಂದ ಹಿಂದಿರುಗಿದ ಮೂರು ಮಸೂದೆಗಳಿಗೆ ಸ್ಪಷ್ಟೀಕರಣ ನೀಡಿ ಮರುಸಲ್ಲಿಸುವ ಬಗ್ಗೆಯೂ ಅವರು ಮಾಹಿತಿ ನೀಡಿದರು.
ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸುವ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 11, 2026 09:44 AM
