ರಾಷ್ಟ್ರಪತಿಗಳ ಭೇಟಿಗೆ ದೆಹಲಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೋರಿದ್ದೇನೆ: ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಲು ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ. ಜತೆಗೆ, ಪ್ರಧಾನಮಂತ್ರಿಯನ್ನು ಭೇಟಿ ಮಾಡಿ, ಬಾಕಿ ಉಳಿದಿರುವ ಅನುದಾನಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಮಾತಿನ ವಿಡಿಯೋ ಇಲ್ಲಿದೆ.
ರಾಯಚೂರು, ಜೂನ್ 23: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳು ಮತ್ತು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ದೆಹಲಿಗೆ ತೆರಳುವುದಾಗಿ ಘೋಷಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗವನ್ನು ಬೇಟಿ ಮಾಡಿ ಹೆಚ್ಚುವರಿ ಮನವಿ ಸಲ್ಲಿಸಿದ್ದೆ. ಅದರ ಬಗ್ಗೆ ಪ್ರಧಾನಿ, ಹಣಕಾಸು ಸಚಿವರ ಜತೆ ಮಾತನಾಡಬೇಕಿದೆ. ಬಾಕಿ ಇರುವ ಮಸೂದೆಗಳ ಬಗ್ಗೆ ಚರ್ಚಿಸಲು ರಾಷ್ಟ್ರಪತಿಗಳ ಭೇಟಿಗೆ ಅನುಮತಿ ಕೋರಿದ್ದೇನೆ. ಅವರು ಮಂಗಳವಾರ ಬೆಳಗ್ಗೆ 11:20 ಕ್ಕೆ ಭೇಟಿಗೆ ಸಮಯ ನೀಡಿದ್ದಾರೆ. ಹೀಗಾಗಿ ದೆಹಲಿಗೆ ತೆರಳಲಿದ್ದೇನೆ ಎಂದರು.