ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವ ಸಂದರ್ಭದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಡೆಯಲಿರುವ ಬಗ್ಗೆ ಸಂಭ್ರಮದ ವಾತಾವರಣವಿದೆ. ಜನ 22 ನೇ ತಾರೀಖನ್ನು ಕಾತುರದಿಂದ ಎದುರು ನೋಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರ ಸಂತೋಷ ಮತ್ತು ನಾಡಿನ ನೆಮ್ಮದಿ ಕೆಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ನೆಲೆಗೊಂಡಿದೆ ಅದರೆ ಅದನ್ನು ಕದಡುವ ದುಸ್ಸಾಹಸಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಗೃಹ ಸಚಿವ ಜಿ ಪರಮೇಶ್ವರ್ (HM G Parameshwara) ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಿ 30 ವರ್ಷಗಳ ಹಿಂದಿನ ಪ್ರಕರಣವನ್ನು ಮುನ್ನೆಲೆಗೆ ತರುವ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವ ಸಂದರ್ಭದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ (Ram Temple Consecration Ceremony) ನಡೆಯಲಿರುವ ಬಗ್ಗೆ ಸಂಭ್ರಮದ ವಾತಾವರಣವಿದೆ. ಜನ 22 ನೇ ತಾರೀಖನ್ನು ಕಾತುರದಿಂದ ಎದುರು ನೋಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರ ಸಂತೋಷ ಮತ್ತು ನಾಡಿನ ನೆಮ್ಮದಿ ಕೆಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಜಯೇಂದ್ರ ಹೇಳಿದರು. ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟನ ಪ್ರತಿಭಟನೆ ನಡೆಸಲಿದ್ದು, ಆ ಸಂದರ್ಭ ಯಾವದಾದರೂ ಅಹಿತಕರ ಘಟನೆ ಜರುಗಿದರೆ ಅದಕ್ಕೆ ಸರ್ಕಾರವೇ ಹೊಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ