Mass Leader; ಸಿದ್ದರಾಮಯ್ಯ ನಿಸ್ಸಂದೇಹವಾಗಿ ಒಬ್ಬ ಜನನಾಯಕ, ಹಾಗೆ ಕರೆಸಿಕೊಳ್ಳುವ ಕೆಲವೇ ನಾಯಕರಲ್ಲಿ ಅವರೂ ಒಬ್ಬರು: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 20, 2023 | 5:27 PM

ಅಧಿಕಾರದಲ್ಲಿರದಿದ್ದರೂ ಜನರನ್ನು ಸೆಳೆಯುವ ಸಾಮರ್ಥ್ಯವಿರುವ ಬಿಎಸ್ ಯಡಿಯೂರಪ್ಪ, ಹೆಚ್ ಡಿ ದೇವೇಗೌಡ, ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು, ದಿವಂಗತ ಬಂಗಾರಪ್ಪ, ದಿವಂಗತ ರಾಮಕೃಷ್ಣ ಹೆಗಡೆ ಮೊದಲಾದವರೆಲ್ಲ ಮಾಸ್ ಲೀಡರ್ ಗಳೆಸಿಕೊಳ್ಳುತ್ತಾರೆ ಎಂದು ರವಿ ಹೇಳಿದರು.

ತುಮಕೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು (Siddaramaiah) ನಖಶಿಖಾಂತ ದ್ವೇಷಿಸುವ ಬಿಜೆಪಿ ಶಾಸಕ ಸಿಟಿ ರವಿ (CT Ravi) ಅವರು ಹೃದಯದ ಒಂದು ಭಾಗದಲ್ಲಿ ಅವರ ಬಗ್ಗೆ ಗೌರವ ಇಟ್ಟುಕೊಂಡಿರುವುದು ಇಂದು ಸಾರ್ವಜನಿಕವಾಗಿ ವೇದ್ಯವಾಯಿತು. ಸಿದ್ದರಾಮಯ್ಯನವರು ಸುರಕ್ಷಿತ ಕ್ಷೇತ್ರಕ್ಕಾಗಿ ಅಲೆದಾಡುತ್ತಿರುವುದನ್ನು ಟೀಕಿಸುತ್ತಲೇ ರವಿಯವರು ಸಿದ್ದರಾಮಯ್ಯರಂಥ ಒಬ್ಬ ಜನನಾಯಕನೇ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿದ್ದರೆ ಅವರನ್ನು ನಂಬಿಕೊಂಡಿರುವ ಕಾಂಗ್ರೆಸ್ ಪಕ್ಷ ಅದ್ಹೇಗೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು. ಅಧಿಕಾರದಲ್ಲಿರದಿದ್ದರೂ ಜನರನ್ನು ಸೆಳೆಯುವ ಸಾಮರ್ಥ್ಯವಿರುವ ಬಿಎಸ್ ಯಡಿಯೂರಪ್ಪ (BS Yediyurappa), ಹೆಚ್ ಡಿ ದೇವೇಗೌಡ (HD Devegowda), ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು, ದಿವಂಗತ ಬಂಗಾರಪ್ಪ, ದಿವಂಗತ ರಾಮಕೃಷ್ಣ ಹೆಗಡೆ ಮೊದಲಾದವರೆಲ್ಲ ಮಾಸ್ ಲೀಡರ್ ಗಳೆಸಿಕೊಳ್ಳುತ್ತಾರೆ ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.