ಮುಂದಿನ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧೆ ಎಂಬ ಗುಟ್ಟು ಬಿಟ್ಟುಕೊಡದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ!
ಚುನಾವಣೆ ಹತ್ತಿರ ಬಂದಾಗ ತಾವು ಸ್ಪರ್ಧಿಸುವ ಕ್ಷೇತ್ರದ ಹೆಸರು ಬಹಿರಂಗಪಡಿಸುವುದಾಗಿ ಅವರು ಹೇಳಿದರು.
ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) 2023ರ ವಿಧಾನ ಸಭಾ ಚುನಾವಣೆಯಲ್ಲಿ (assembly polls) ಎಲ್ಲಿಂದ ಸ್ಪರ್ಧಿಸಲಿದ್ದಾರೆ ಅನ್ನೋದು ಯಕ್ಷಪ್ರಶ್ನೆಯಾಗಿದೆ. ಸೋಮವಾರ ಬೆಳಗ್ಗೆ ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ವರುಣಾ (Varuna) ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಅಂತ ಕೇಳಿದ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸಲಿಲ್ಲ. ಚುನಾವಣೆ ಹತ್ತಿರ ಬಂದಾಗ ತಾವು ಸ್ಪರ್ಧಿಸುವ ಕ್ಷೇತ್ರದ ಹೆಸರು ಬಹಿರಂಗಪಡಿಸುವುದಾಗಿ ಅವರು ಹೇಳಿದರು.
Latest Videos