ಅಂದು ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ: ವಿಡಿಯೋ ವೈರಲ್
ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ನಿಂತಲ್ಲಿ ಕೂತಲ್ಲೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಅಂತೂ ಪ್ರತಿದಿನ ಸಾವಿನ ಸುದ್ದಿ ಕೇಳಿಬರುತ್ತಲೇ ಇದೆ. ಹೀಗಾಗಿ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದು, ಸಂಬಂಧ ರಾಜ್ಯ ಸರ್ಕಾರ ಸಹ ಈ ಬಗ್ಗೆ ವರದಿ ನೀಡುವಂತೆ ಸಮಿತಿ ರಚಿಸಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯನವರು ಕೊರೋನಾ ಲಸಿಕೆ ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎನ್ನುವ ಮಾತುಗಳನ್ನಾಡಿದ್ದಾರೆ.
ಬೆಂಗಳೂರು (ಜು.04): ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ನಿಂತಲ್ಲಿ ಕೂತಲ್ಲೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಅಂತೂ ಪ್ರತಿದಿನ ಸಾವಿನ ಸುದ್ದಿ ಕೇಳಿಬರುತ್ತಲೇ ಇದೆ. ಹೀಗಾಗಿ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದು, ಸಂಬಂಧ ರಾಜ್ಯ ಸರ್ಕಾರ ಸಹ ಈ ಬಗ್ಗೆ ವರದಿ ನೀಡುವಂತೆ ಸಮಿತಿ ರಚಿಸಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯನವರು ಕೊರೋನಾ ಲಸಿಕೆ ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎನ್ನುವ ಮಾತುಗಳನ್ನಾಡಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯಿಸಿ, ಹಠಾತ್ ಸಾವಿಗೂ ಕೋವಿಡ್ ಲಸಿಕೆಗೆ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಆತುರಾತುರದಲ್ಲಿ ಕೋವಿಡ್ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲು ಆಗಲ್ಲ. ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದೇನು?
ಈ ಹಿಂದೆ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ. ಇದರಿಂದ ಕೊರೋನಾ ಬರುವುದಿಲ್ಲ. ಅಲ್ಲದೇ ಈ ಲಸಿಕೆಯಿಂದ ಮರಣ ಪ್ರಮಾಣ ಕಡಿಮೆ ಎಂದು ಜನರಿಗೆ ಕರೆ ನೀಡಿದ್ದರು. ಆದ್ರೆ, ಇದೀಗ ಕೋವಿಡ್ ಲಸಿಕೆಯಿಂದಲೇ ಸಾವನ್ನಪ್ಪಿರಬಹುದು ಎನ್ನುವ ಸಿಎಂ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಅವರೇ ಪಕ್ಷದ ಶಾಸಕ ಅನುದಾನದಲ್ಲಿ 100 ಕೋಟಿ ರೂಪಾಯಿಯನ್ನು ಲಸಿಕೆ ಖರೀದಿಗೆ ಅಂದಿನ ಬಿಜೆಪಿ ಸರ್ಕಾರಕ್ಕೆ ನೀಡಿ ಲಸಿಕೆಗೆ ಪ್ರೋತ್ಸಹಿಸಿದ್ದರು. ಇದೀಗ ಅಂದಿನ ವಿಡಿಯೋ ಇಟ್ಟುಕೊಂಡೇ ಸಿದ್ದರಾಮಯ್ಯನವರನ್ನು ಸೋಶಿಯಲ್ ಮಿಡಿಯಾನಲ್ಲಿ ಟ್ರೋಲ್ ಮಾಡಲಾಗುತ್ತಿದ್ದು, ಈ ರೀತಿ ಡಬಲ್ ಸ್ಟ್ಯಾಂಡ್ ಬಿಡಿ ಸಿದ್ದರಾಮಯ್ಯನವರೇ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.