AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ: ಸಿದ್ದರಾಮಯ್ಯ ಆಗ್ರಹ

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ: ಸಿದ್ದರಾಮಯ್ಯ ಆಗ್ರಹ

ಪ್ರಸನ್ನ ಗಾಂವ್ಕರ್​
| Edited By: |

Updated on: May 21, 2026 | 4:41 PM

Share

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಸಿಎಂ ಸಿದ್ದರಾಮಯ್ಯನವರು (Siddaramaiah) ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ನೀಟ್​ ಪರೀಕ್ಷೆ ಅಕ್ರಮ (NEET Exam Scam) ಖಂಡಿಸಿ ಫ್ರೀಡಂಪಾರ್ಕ್​ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆ ಎಂಬುದಕ್ಕೆ ಕೇಂದ್ರದಿಂದ ಅರ್ಥ ಹೊರಟೋಗಿದೆ. ಸಿಇಟಿ ಮಾದರಿಯನ್ನು ಕೇಂದ್ರ ಸರ್ಕಾರ ನೀಟ್‌ ಪರೀಕ್ಷೆಗೆ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ, ರಾಜ್ಯಗಳಿಗೆ ಸ್ವತಂತ್ರವಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು, (ಮೇ 21): ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಸಿಎಂ ಸಿದ್ದರಾಮಯ್ಯನವರು (Siddaramaiah) ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ನೀಟ್​ ಪರೀಕ್ಷೆ ಅಕ್ರಮ (NEET Exam Scam) ಖಂಡಿಸಿ ಫ್ರೀಡಂಪಾರ್ಕ್​ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆ ಎಂಬುದಕ್ಕೆ ಕೇಂದ್ರದಿಂದ ಅರ್ಥ ಹೊರಟೋಗಿದೆ. ಸಿಇಟಿ ಮಾದರಿಯನ್ನು ಕೇಂದ್ರ ಸರ್ಕಾರ ನೀಟ್‌ ಪರೀಕ್ಷೆಗೆ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ, ರಾಜ್ಯಗಳಿಗೆ ಸ್ವತಂತ್ರವಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸಿಎಂ ಆಗದ್ದ ಕಾಲದಲ್ಲೇ PSI ಪ್ರಶ್ನೆಪತ್ರಿಕೆ ಸೋರಿಕೆ ಆಯ್ತು. ADGP ಮಟ್ಟದ ಅಧಿಕಾರಿ ಜೈಲಿಗೆ ಹೋದ ನಿದರ್ಶನ ಹಿಂದೆ ಇರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಅವ್ಯಾಹತವಾಗಿ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದೆ. ಇದಕ್ಕೆ ಯಾರು ಜವಾಬ್ದಾರಿ? ಜವಾಬ್ದಾರಿ ಹೊರಬೇಕಾದವರು ಮೋದಿ ಎಂದು ಕಿಡಿಕಾರಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More