ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವಂತೆ ಕಾರ್ಯಕರ್ತರನ್ನು ಆಗ್ರಹಿಸಿದ ಸಿದ್ದರಾಮಯ್ಯ

ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವಂತೆ ಕಾರ್ಯಕರ್ತರನ್ನು ಆಗ್ರಹಿಸಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
| Updated By: Digi Tech Desk

Updated on:Jan 20, 2023 | 5:49 PM

ಬರೀ ಶಿಳ್ಳೆ ಹಾಕಿ ಮತ್ತು ಚಪ್ಪಾಳೆ ತಟ್ಟುವುದರಿಂದ ನೀವು ನನಗೆ ಪ್ರೀತಿ-ಗೌರವ ನೀಡಿದಂತಾಗುವುದಿಲ್ಲ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದಾಗಲೇ ನಿಜವಾದ ಗೌರವ ತೋರಿದಂತೆ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು:  ಜೆಡಿಎಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಮುಂದುವರಿದಿದೆ. ಶುಕ್ರವಾರ ಮೈಸೂರಲ್ಲಿ ಹಲವಾರು ಜೆಡಿಎಸ್ ಕಾರ್ಯಕರ್ತರನ್ನು (workers) ಸಿದ್ದರಾಮಯ್ಯ (Siddaramaiah) ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತಾಡಿದ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಕಾಂಗ್ರೆಸ್ ನ (Congress) ಕಾರ್ಯಕರ್ತರು ಅವರನ್ನು ಗೆಲ್ಲಿಸಲು ಶ್ರಪಪಡಬೇಕು. ಬರೀ ಶಿಳ್ಳೆ ಹಾಕಿ ಮತ್ತು ಚಪ್ಪಾಳೆ ತಟ್ಟುವುದರಿಂದ ನೀವು ನನಗೆ ಪ್ರೀತಿ-ಗೌರವ ನೀಡಿದಂತಾಗುವುದಿಲ್ಲ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದಾಗಲೇ ನಿಜವಾದ ಗೌರವ ತೋರಿದಂತೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 20, 2023 05:46 PM