ಮೈಸೂರು: ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ

Edited By:

Updated on: May 07, 2026 | 1:25 PM

ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮೈಲಾರಿ ಹೋಟೆಲ್‌ನಲ್ಲಿ ಕೆಎನ್ ರಾಜಣ್ಣ ಜತೆ ತಿಂಡಿ ಸವಿದರು. ಬಳಿಕ ತಮ್ಮ ನಿವಾಸದ ಬಳಿ ದಿವಂಗತ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ನೆನಪಿಗಾಗಿ ಎರಡು ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

ಮೈಸೂರು, ಮೇ 7: ಸಾಂಸ್ಕೃತಿಕ ನಗರಿ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 7) ಬೆಳಗ್ಗೆ ನಗರದ ಸುಪ್ರಸಿದ್ಧ ಮೈಲಾರಿ ಹೋಟೆಲ್​ಗೆ ಭೇಟಿ ನೀಡಿ ದೋಸೆ, ಇಡ್ಲಿ ಸವಿದರು. ಈ ವೇಳೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಸ್ಥಳೀಯ ನಾಯಕರು ಸಿಎಂಗೆ ಸಾಥ್ ನೀಡಿದರು. ಹೋಟೆಲ್‌ನಲ್ಲಿ ದೋಸೆ ಹಾಗೂ ಇಡ್ಲಿ ಸವಿದ ಸಿದ್ದರಾಮಯ್ಯ, ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಮುಖ್ಯಮಂತ್ರಿಗಳು ತಮ್ಮ ಹಿರಿಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಸ್ಮರಣಾರ್ಥ ಮಹತ್ವದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದರು. ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ನಿವಾಸದ ಮುಂಭಾಗದಲ್ಲಿ ‘ಸಮತಾ ಟ್ರಸ್ಟ್’ ವತಿಯಿಂದ ಉಚಿತ ಸೇವೆಗಾಗಿ ಮೀಸಲಿಡಲಾದ ಎರಡು ಆಂಬುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More