ಮುಂದಿನ ಜನ್ಮದಲ್ಲಿ ಮುಸಲ್ಮಾನಾಗುತ್ತೇನೆಂದ ಸಿದ್ದರಾಮಯ್ಯ ಈಗಿಂದಲೇ ತಯಾರಿ ನಡೆಸಿದ್ದಾರೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 06, 2024 | 4:55 PM

ಇದು ಕೇವಲ ಒಂದು ಜಾತಿಗೆ ಸೇರಿದ ಹೋರಾಟವಲ್ಲ, ಯಾಕೆಂದರೆ ಗುಡಿ, ಮಠಗಳ ಜಾಗವನ್ನು ಕಬಳಿಸುವ ಹುನ್ನಾರ ನಡೆದಿದೆ, ವಿಜಯಪುರದಲ್ಲಿ ದಲಿತರಿಗೆ ಸೇರಿದ ಸ್ಮಶಾನವನ್ನೂ ತನ್ನದು ಅಂತ ವಕ್ಫ್ ಬೋರ್ಡ್ ಹೇಳಿದೆ, ಹಾಗಾಗಿ ಇದು ಎಲ್ಲ ಹಿಂದೂಗಳಿಗೆ ಸೇರಿದ ಹೋರಾಟ ಎಂದು ಬಸನಗೌಡ ಯತ್ನಾಳ್ ಹೇಳಿದರು.

ವಿಜಯಪುರ: ಸಂಸತ್ತಿನಲ್ಲಿ ವಕ್ಫ್ ಗೆ ಸಂಬಂಧಿಸಿದ ಕಾಯ್ದೆಯನ್ನು ತಿದ್ದುಪಡಿ ಮಾಡಿ ಜಾರಿಗೆ ತರುವ ಮೊದಲೇ ಕರ್ನಾಟಕದಲ್ಲಿ ವಕ್ಫ್​​ಗೆ ಸೇರಿದ್ದು ಹೇಳಿಕೊಳ್ಳುತ್ತಿರುವ ಜಮೀನುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ವ್ಯವಸ್ಥಿತ ಸಂಚನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ನಡೆಸಿರುವರೆಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವೆ ಅಂತ ಹೇಳಿರುವ ಸಿದ್ದರಾಮಯ್ಯ ಈಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವಂತಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.