ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಬರಲಿ ಅಂತಲೇ ಅವರನ್ನು ದೆಹಲಿಗೆ ಕರೆಸಲಾಗಿತ್ತು: ಸತೀಶ್ ಜಾರಕಿಹೊಳಿ

Updated on: Jul 30, 2025 | 1:41 PM

ಮಾಜಿ ಸಂಸದ ಡಿಕೆ ಸುರೇಶ್ ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್) ಗೆ ಅಧ್ಯಕ್ಷರಾಗಬೇಕೆನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸತೀಶ್, ಫೆಡರೇಶ್​ನಲ್ಲಿ ಯಾರಿಗೆ ಮೆಜಾರಿಟಿ ಇರುತ್ತದೆ ಅವರು ಅಧ್ಯಕ್ಷರಾಗುತ್ತಾರೆ, ಇದು ಸಹಕಾರಿ ಕ್ಷೇತ್ರವಾಗಿರುವುದರಿಂದ ಪಕ್ಷಗಳು ಮುಖ್ಯವಾಗಲ್ಲ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಜೆಪಿ ನಾಯಕರು ಅಧ್ಯಕ್ಷರಾಗಿರುವ ನಿದರ್ಶನಗಳಿವೆ ಎಂದು ಹೇಳಿದರು.

ಬೆಂಗಳೂರು, ಜುಲೈ 30: ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿ ಆಗಬಾರದು ಅಂತೇನಿಲ್ಲ, ಎಲ್ಲರಿಗೂ ಆಸೆ ಇದ್ದೇ ಇರುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ ಇಬ್ಬರ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಮಾತಾಡಿದ ಜಾರಕಿಹೊಳಿ, ಅವರು ಕಚ್ಚಾಡುವುದು ಬೇಡ ಅಂತಲೇ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರನ್ನೂ ದೆಹಲಿಗೆ ಕರೆಸಿ ಸಿದ್ದರಾಮಯ್ಯ ರಾಷ್ಟ್ರಮಟ್ಟದ ರಾಜಕಾರಣಕ್ಕೆ ಬರಲಿ, ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿ ಅಂತ ಹೇಳಿದ್ದರು, ಅದರೆ ವಾಪಸ್ಸು ಕಳಿಸುವಾಗ ಸಿದ್ದರಾಮಯ್ಯನೇ ಸಿಎಂ ಆಗಿ ಮುಂದುವರಿಯಲಿ ಅಂತ ಅವರೇ ಹೇಳಿದ್ದಾರೆ ಎಂದು ಜಾರಕಿಹೊಳಿ ಹೇಳಿದರು

ಇದನ್ನೂ ಓದಿ:  ಸುರ್ಜೇವಾಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇ ಗೊತ್ತಿಲ್ಲವೆಂದ ಸಚಿವ ಸತೀಶ್ ಜಾರಕಿಹೊಳಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ