Raichur News; ಸಿದ್ದರಾಮಯ್ಯ ಎಷ್ಟು ಸಮಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಅನ್ನೋದು ಹೈಕಮಾಂಡ್ ಗೆ ಬಿಟ್ಟ ವಿಚಾರ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಪಕ್ಷ, ಶಾಸಕರ, ಕಾರ್ಯಕರ್ತರ ಸಮಸ್ಯೆಗಳನ್ನು ಪಕ್ಷದ ವೇದಿಕೆಯೊಳಗೆ ಚರ್ಚಿಸಲಾಗುತ್ತದೆ ಎಂದು ಶೆಟ್ಟರ್ ಹೇಳಿದರು,
ರಾಯಚೂರು: ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರ ಚರ್ಚೆಯ ವಿಷಯವೇ ಅಲ್ಲ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು. ನಗರದಲ್ಲಿಂದು ಪತ್ರಕರ್ತರು, ಆಳಂದ್ ಶಾಸಕ ಬಿಆರ್ ಪಾಟೀಲ್ (BR Patil) ಮುಖ್ಯಮಂತ್ರಿಗೆ ಬರೆದಿರುವ ಪತ್ರದ ಬಗ್ಗೆ ಪ್ರಶ್ನಿಸಿದಾಗ, ಶಾಸಕರ ಲೆಟರ್ ಹೆಡ್ ನಲ್ಲಿ ಒಂದು ಫೇಕ್ ಪತ್ರ ತಯಾರಿಸಲಾಗಿದ್ದು ಅದನ್ನು ಬಿಜೆಪಿ ಸೃಷ್ಟಿಸಿದ್ದು ಅಂತ ಗೊತ್ತಾಗಿದೆ, ಕಾಂಗ್ರೆಸ್ ಒಂದು ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಪಕ್ಷ, ಶಾಸಕರ, ಕಾರ್ಯಕರ್ತರ ಸಮಸ್ಯೆಗಳನ್ನು ಪಕ್ಷದ ವೇದಿಕೆಯೊಳಗೆ ಚರ್ಚಿಸಲಾಗುತ್ತದೆ ಎಂದ ಶೆಟ್ಟರ್, 27ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ, ಸಭೆಯಲ್ಲಿ ವಿಷಯಗಳನ್ನು ಚರ್ಚಿಸಲಾಗುವುದು ಅಂತ ಹೇಳಿದರು. 5-ವರ್ಷದ ಅವಧಿಗೆ ಸಿದ್ದರಾಮಯ್ಯನೇ (Siddaramaiah) ಮುಖ್ಯಮಂತ್ರಿ ಯಾಗಿ ಮುಂದುವರಿಯುತ್ತಾರಾ ಅಂತ ಕೇಳಿದಾಗ, ಅದು ಹೈಕಮಾಂಡ್ ಗೆ ಬಿಟ್ಟ ವಿಷಯ, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅವರು ನೇಮಿಸಿದ್ದಾರೆ, ಅವರು ಮುಂದುವರಿದಿದ್ದಾರೆ ಎಂದು ಶೆಟ್ಟರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ