ಮುಂದಿನ 3-ವರ್ಷ ಅವಧಿಗೂ ಸಿದ್ದರಾಮಯ್ಯನೇ ಸಿಎಂ ಆಗಿ ಮುಂದುವರಿಯುತ್ತಾರೆ: ಬಸವರಾಜ ರಾಯರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 14, 2025 | 8:01 PM

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿ ಅಂತ ಹೈಕಮಾಂಡ್ ಹೇಳಿದೆ, ಅವರನ್ನು ಸಿಎಂ ಮಾಡಬೇಕೆಂದು ಶಾಸಕರು ಹೇಳಿದರೆ ಅದನ್ನು ಯಾರು ತಡೆದಾರು? ಶಿವಕುಮಾರ್ ಖಂಡಿತ ಮುಖ್ಯಮಂತ್ರಿ ಆಗುತ್ತಾರೆ ಎಂದು ಬಸವರಾಜ ರಾಯರೆಡ್ಡಿ ಹೇಳಿದರು. ಹೇಳಿಕೆಗಳ ಮೂಲಕ ವಿವಾದ ಸೃಷ್ಟಿಸುವುದರಲ್ಲಿ ರಾಯರೆಡ್ಡಿ ನಿಷ್ಣಾತರು.

ಕೊಪ್ಪಳ, ಏಪ್ರಿಲ್ 14: ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು, ಮುಂದಿನ 3-ವರ್ಷ ಅವಧಿಗೂ ಸಿದ್ದರಾಮಯ್ಯನವರೇ (Siddaramaiah) ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಮತ್ತೊಮ್ಮೆ ಹೇಳಿದರು. ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದವರಲ್ಲಿ ತಾನೂ ಒಬ್ಬ, 5-ವರ್ಷ ಅವಧಿಗೆ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ, ಒಂದು ವೇಳೆ ಶಾಸಕಾಂಗ ಪಕ್ಷ ಅವರನ್ನು ಬದಲಾಯಿಸಬೇಕು ಅಂತ ಹೇಳಿದರೆ ಮಾತ್ರ ಹೈಕಮಾಂಡ್ ಅವರ ಅಭಿಪ್ರಾಯಗಳನ್ನು ಪಡೆದು ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ರಾಯರೆಡ್ಡಿ ಹೇಳಿದರು.

ಇದನ್ನೂ ಓದಿ:  ಗ್ಯಾರಂಟಿ ಯೋಜನೆ ಜಾರಿಯಲ್ಲಿಟ್ಟು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳೋದು ದುಸ್ಸಾಧ್ಯ: ಬಸವರಾಜ ರಾಯರೆಡ್ಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.