ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡೋದು ಶತಸಿದ್ಧ, ಅಲ್ಪಾವಧಿಯ ವಿಸ್ತರಣೆಯೂ ಸಿಗಲಾರದು: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Jul 11, 2025 | 11:14 AM

ವಿಪಕ್ಷ ನಾಯಕನಾಗಿ ತನಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಮತ್ತಾರು ತಿಂಗಳು ಇಲ್ಲವೇ ಒಂದ ವರ್ಷದ ವಿಸ್ತರಣೆಯನ್ನು ಕೇಳಿದ್ದಾರೆ, ಆದರೆ ಶಿವಕುಮಾರ್ ಅದಕ್ಕೆ ಒಪ್ಪುತ್ತಿಲ್ಲ, ಈ ಸಮಯದಲ್ಲಿ ದೆಹಲಿಯಲ್ಲ್ಲಿರಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ, ಸಿದ್ದರಾಮಯ್ಯರಾದರೋ ದೆಹಲಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ 5 ವರ್ಷ ನಾನೇ ಸಿಎಂ ಅನ್ನುತ್ತಿದ್ದಾರೆ, ಅದರೆ ಅವರು ಬದಲಾಗೋದು ನೂರಕ್ಕೆ ನೂರರಷ್ಟು ಸತ್ಯ ಎಂದು ಅಶೋಕ ಹೇಳಿದರು.

ಬೆಂಗಳೂರು, ಜುಲೈ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇನ್ನೂ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಏತನ್ಮಧ್ಯೆ, ನಗರದಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿರುವ ವಿರೋಧ ಪಕ್ಷದ ನಾಯಕ ಅರ್ ಅಶೋಕ (R Ashoka), ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಶಿವಕುಮಾರ್ ಆ ಸ್ಥಾನಕ್ಕೇರೋದು ಶತಸಿದ್ಧ ಎಂದು ಹೇಳಿದರು. ತಾನು ಭವಿಷ್ಯ ನುಡಿದಿದ್ದು ಮತ್ತು ರಾಜಣ್ಣ ಕ್ರಾಂತಿ ನಡೆಯುವ ಮುನ್ಸೂಚನೆ ನೀಡಿದ್ದು ನಿಜವಾಗುತ್ತಿದೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ, ಅದು ಮೊದಲಿಂದಲೂ ಇತ್ತು, ಈಗ ವಿಕೋಪಕ್ಕೆ ಹೋಗಿದೆ, ಕೆಲ ಮಂತ್ರಿಗಳು ಸಹ ಸ್ಥಾನ ಉಳಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ ಎಂದು ಅಶೋಕ ಹೇಳಿದರು.

ಇದನ್ನೂ ಓದಿ:  ಕರ್ನಾಟಕದಲ್ಲಿ ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಕೇಂದ್ರವನ್ನ ಪ್ರಶ್ನಿಸಿದ್ದ ರಾಹುಲ್​ಗೆ ಅಶೋಕ್​ ತಿರುಗೇಟು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.