Video: ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ

Updated on: May 28, 2026 | 12:02 PM

ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ್ದಾರೆ. ಇಂದು ರಾಜ್ಯಪಾಲರು ಇರುವುದಿಲ್ಲವಂತೆ, ಹೋಗಿ ನೋಡುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ತಾನು ಪ್ರಬಲವಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟಪಡಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ. ಇದು ಹೈಕಮಾಂಡ್‌ಗೆ ನಿರಾಳತೆ ತಂದಿದೆ.

ಬೆಂಗಳೂರು, ಮೇ 28: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ್ದಾರೆ. ಇಂದು ರಾಜ್ಯಪಾಲರು ಇರುವುದಿಲ್ಲವಂತೆ, ಹೋಗಿ ನೋಡುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ತಾನು ಪ್ರಬಲವಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟಪಡಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ. ಇದು ಹೈಕಮಾಂಡ್‌ಗೆ ನಿರಾಳತೆ ತಂದಿದೆ.

ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ, ರಾಜ್ಯಪಾಲರು ಇಲ್ವಂತಲ್ಲ, ಹೋಗ್ತೀನಿ ನೋಡೋಣ” ಎಂದು ಹೇಳುವ ಮೂಲಕ, ತಮ್ಮ ನಿರ್ಧಾರ ಸ್ಪಷ್ಟವಾಗಿದೆ ಎಂದು ಸೂಚಿಸಿದರು. ಪ್ರಸ್ತುತ, ರಾಜ್ಯಪಾಲರು ವೈಯಕ್ತಿಕ ಕಾರಣಗಳಿಂದ ಇಂದೋರ್‌ನಲ್ಲಿದ್ದು, ಇಂದು ಬೆಂಗಳೂರಿಗೆ ವಾಪಸ್ ಆಗುವ ನಿರೀಕ್ಷೆಯಿದೆ. ಈ ಸುಗಮ ಪರಿವರ್ತನೆಯನ್ನು ಕಾಂಗ್ರೆಸ್‌ಗೆ ಒಳ್ಳೆಯ ಬೆಳವಣಿಗೆ ಎಂದು ಪಕ್ಷದ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published on: May 28, 2026 12:01 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More