ಪಟ್ಟದ ಪಗಡೆಯಾಟಕ್ಕೆ ಹೊಸ ಟ್ವಿಸ್ಟ್: ರಾಹುಲ್ ಬಳಿ ಪರಮೇಶ್ವರ್ರನ್ನ ಸಿಎಂ ಮಾಡಿ ಎಂದರಾ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದ್ದು, ತೆರವಾಗುವ ಸಿಎಂ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ ಅವರ ಹೆಸರನ್ನು ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ್ದಾರೆ. ಪಕ್ಷ ಸಂಘಟನೆ ಮತ್ತು ಅಧಿಕಾರದ ಅನುಭವದ ಆಧಾರದ ಮೇಲೆ ಈ ಶಿಫಾರಸು ಮಾಡಲಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು, ಮೇ 27: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರ ರಾಜಕೀಯ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ 28) ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ. ಈ ಸಂದರ್ಭದಲ್ಲಿ, ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಂದೆ ತೆರವಾಗುವ ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರಂತೆ. ಪಕ್ಷ ಸಂಘಟನೆಯಲ್ಲಿನ ಅನುಭವ ಮತ್ತು ಆಡಳಿತದಲ್ಲಿನ ಪರಿಣತಿಯನ್ನು ಉಲ್ಲೇಖಿಸಿ, ಡಾ. ಜಿ. ಪರಮೇಶ್ವರ ಅವರು ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 27, 2026 01:04 PM
Follow Us

