ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ನಿವಾಸದ ಗೃಹಪ್ರವೇಶ: ರಾತ್ರಿಯಿಂದಲೇ ಹೋಮ-ಹವನ, ಪೂಜೆ

Edited By:

Updated on: Sep 14, 2026 | 9:13 AM

ಮೈಸೂರಿನ ಕುವೆಂಪುನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ನಿವಾಸದ ಗೃಹಪ್ರವೇಶ ಪೂಜೆ ವಿಜೃಂಭಣೆಯಿಂದ ನೆರವೇರುತ್ತಿದೆ. ಭಾನುವಾರ ರಾತ್ರಿಯಿಂದ ಗಣಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕುಟುಂಬದ ಸದಸ್ಯರು ಈ ಶುಭ ಕಾರ್ಯದಲ್ಲಿ ಭಾಗವಹಿಸಿದರು.

ಮೈಸೂರು, ಸೆಪ್ಟೆಂಬರ್ 14: ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ಮನೆಯ ಗೃಹಪ್ರವೇಶ ಸಮಾರಂಭ ಇಂದು ನೆರವೇರುತ್ತಿದ್ದು, ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗುತ್ತಿದೆ. ನಗರದ ಕುವೆಂಪುನಗರ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಈ ನಿವಾಸದಲ್ಲಿ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಲಾಯಿತು. ಗೃಹಪ್ರವೇಶದ ಅಂಗವಾಗಿ ಭಾನುವಾರ ರಾತ್ರಿಯಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಗಣಹೋಮ ಸೇರಿದಂತೆ ಹಲವು ಪೂಜಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ನಡೆಸಲಾಯಿತು. ಈ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿ, ಪೂಜೆಗಳಲ್ಲಿ ಪಾಲ್ಗೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More