ಸಿದ್ದರಾಮಯ್ಯ ಚಡ್ಡಿ ಕಪ್ಪಾಗಿದೆ; ಹೆಚ್ಡಿ ಕುಮಾರಸ್ವಾಮಿ ವ್ಯಂಗ್ಯ
‘ನನ್ನ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಆದ್ರೆ, ಸಿದ್ದರಾಮಯ್ಯನವರು ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸೈಟ್ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಆದ್ರೆ, ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡ್ತಿರಲಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು, ಆ.10: ‘ನನ್ನ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಆದ್ರೆ, ಸಿದ್ದರಾಮಯ್ಯನವರು ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸೈಟ್ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಆದ್ರೆ, ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಸಿಎಂ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ಸೈಟ್ ವಾಪಸ್ ಕೊಡಲು ಸಿದ್ಧ ಎಂದಿದ್ದಾರಂತೆ. ಸೈಟ್ ವಾಪಸ್ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವಾ?. ಎಂದು ಮೈಸೂರಿನಲ್ಲಿ ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 10, 2024 04:52 PM