ಮುಂದಿನ ಸಿಎಂ ಎಂದು ಕೂಗಿದ ಅಭಿಮಾನಿಗೆ ತಮ್ಮದೇ ಸ್ಟೈಲ್​​ನಲ್ಲಿ ಉತ್ತರ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

Edited By:

Updated on: Oct 28, 2026 | 6:28 PM

ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮುಂದಿನ ಮುಖ್ಯಮಂತ್ರಿ ಎಂಬ ಅಭಿಮಾನಿ ಘೋಷಣಗೆ ಪ್ರತಿಕ್ರಿಯಿಸಿದ ಅವರು, ನಾನಾಗಲೇ ಆಗಿದ್ದೀನಿ ಎಂದು ಹಾಸ್ಯಭರಿತವಾಗಿ ಪ್ರತಿಕ್ರಿಯಿಸಿದರು. ಬೆನ್ನುನೋವಿದ್ದರೂ, ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈಶ್ವರ ಖಂಡ್ರೆ, ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಹಾಗೂ ಸ್ವಾಮೀಜಿಗಳು ಈ ವೇಳೆ ಉಪಸ್ಥಿತರಿದ್ದರು.

ಮೈಸೂರು, ಅಕ್ಟೋಬರ್​​ 28: ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಈ ವೇಳೆ ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆ ಅಭಿಮಾನಿಯಿಂದ ಮೊಳಗಿದೆ. ಇದಕ್ಕೆ ಅಲ್ಲೇ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಏಯ್ ಕೂತುಕೊಳ್ಳಪ್ಪ, ಅದಾಗಲೇ ನಾನು ಸಿಎಂ ಆಗಿದ್ದೇನೆ, ಇನ್ನು ಪುನಃ ಮುಂದಿನ ಸಾರಿ ಕೂಗ್ತಾ ಇದ್ದೀಯ ಎಂದು ಹಾಸ್ಯಭರಿತವಾಗಿ ಉತ್ತರಿಸಿದ್ದಾರೆ. ಬೆನ್ನುನೋವಿದ್ದರೂ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 28, 2026 06:27 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More