AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು

ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು

Jagadisha B
| Edited By: |

Updated on: Apr 01, 2026 | 8:29 AM

Share

ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿಯ ಪ್ರಯುಕ್ತ ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಮಠಕ್ಕೆ ಹೂವಿನ ಅಲಂಕಾರ ಮಾಡಲಾಗಿದೆ. ಭಕ್ತಾದಿಗಳು ಬೆಳಗಿನ ಜಾವದಿಂದಲೇ ಗದ್ದುಗೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಎಸ್ಎಸ್ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಒಂದೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ.

ತುಮಕೂರು, ಏಪ್ರಿಲ್​​ 01: ನಡೆದಾಡುವ ದೇವರು ಎಂದು ಪ್ರಸಿದ್ಧರಾದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವವನ್ನು ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸಿ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಮಠದ ಆವರಣದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಕಾರ್ಯಕ್ರಮವನ್ನು ಒಂದೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರು ಸಹ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us