‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು

Edited By:

Updated on: Feb 06, 2025 | 7:38 PM

ಕನ್ನಡ ಚಿತ್ರರಂಗದ ಖ್ಯಾತ ನಟ ಲೂಸ್ ಮಾದ ಯೋಗಿ ಅವರು 18 ವರ್ಷಗಳ ಜರ್ನಿಯಲ್ಲಿ ಏಳು-ಬೀಳುಗಳನ್ನು ನೋಡಿದ್ದಾರೆ. ಆ ಬಗ್ಗೆ ಅವರು ನೇರವಾಗಿ ಮಾತನಾಡಿದ್ದಾರೆ. ಈ ಅವರು ‘ಸಿದ್ಲಿಂಗು 2’ ಸಿನಿಮಾದಲ್ಲಿ ನಟಿಸಿದ್ದಾರೆ. ‘ಈಗ ಎಲ್ಲ ಸರಿಯಾಗಿ ಲೈನ್​ಅಪ್ ಆಗಿದೆ. ಒಳ್ಳೆಯ ಸಿನಿಮಾಗಳು ಸಿಗುತ್ತಿವೆ’ ಎಂದು ಯೋಗಿ ಅವರು ಹೇಳಿದ್ದಾರೆ.

ನಟ ಯೋಗಿ ಅವರು ತಮ್ಮ ಸಿನಿಮಾ ಜರ್ನಿ ಬಗ್ಗೆ ಮಾತನಾಡಿದ್ದಾರೆ. ‘ನಾನು ಯಾರನ್ನೂ ದೂಷಿಸಲ್ಲ. ಅದು ನನ್ನ ವ್ಯಕ್ತಿತ್ವ ಅಲ್ಲ. ನಾನು ಮಾಡಿಕೊಂಡ ತಪ್ಪುಗಳಿಗೆ ನಾನೇ ಹೊಣೆ. ಇನ್ನೊಬ್ಬರ ಹೆಸರು ಹೇಳಲ್ಲ. ಅವರಿಂದ ಈ ರೀತಿ ಆಯ್ತು ಅಂತ ಹೇಳೋಕೆ ಆಗಲ್ಲ. ನಾನು ಸರಿಯಾಗಿ ಇದ್ದಿದ್ದರೆ ಎಲ್ಲರೂ ಸರಿಯಾಗಿ ಇರುತ್ತಿತ್ತು. ನನಗೆ ಸಪೋರ್ಟ್​ ಬೇಕಿತ್ತು. ಹಾಗಾಗಿ ಕೆಲವು ಸಿನಿಮಾಗಳನ್ನು ಮಾಡಿದೆ. ನಾನು ಚಿತ್ರರಂಗಕ್ಕೆ ಬಂದು 18 ವರ್ಷ ಕಳೆಯಿತು. ‘ಸಿದ್ಲಿಂಗು 2’ ಸಿನಿಮಾ ನನಗೆ ತುಂಬ ಸ್ಪೆಷಲ್’ ಎಂದು ಯೋಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More