ಅಹಂ ಇಲ್ಲದೇ ರಮ್ಯಾ ‘ಸಿದ್ಲಿಂಗು’ ಕಥೆ ಕೇಳಿದ್ದರು: ಆ ದಿನಗಳನ್ನು ನೆನೆದ ವಿಜಯ್ ಪ್ರಸಾದ್

Updated on: Feb 06, 2025 | 10:50 PM

‘ಸಿದ್ಲಿಂಗು 2’ ಸಿನಿಮಾ ಫೆಬ್ರವರಿ 14ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾಗೆ ವಿಜಯ್ ಪ್ರಸಾದ್ ಅವರು ನಿರ್ದೇಶನ ಮಾಡಿದ್ದಾರೆ. ‘ರಮ್ಯಾ ಅವರು ದೊಡ್ಡ ಸ್ಟಾರ್ ನಟಿ ಆಗಿದ್ದರೂ ಕೂಡ ನನ್ನ ಮೊದಲನೇ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದರು. ಯಾವುದೇ ಅಹಂಕಾರ ಇಲ್ಲದೇ ಕಥೆ ಕೇಳಿ ಸಿನಿಮಾ ಮಾಡಿದ್ದರು’ ಎಂದು ವಿಜಯ್ ಪ್ರಸಾದ್ ಹೇಳಿದ್ದಾರೆ.

ಫೆಬ್ರವರಿ 14ರಂದು ‘ಸಿದ್ಲಿಂಗು 2’ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ವಿಜಯ್ ಪ್ರಸಾದ್ ಅವರು ಆ್ಯಕ್ಷನ್​-ಕಟ್ ಹೇಳಿದ್ದಾರೆ. ‘ಸಿದ್ಲಿಂಗು’ ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ಆ ಚಿತ್ರದಲ್ಲಿ ರಮ್ಯಾ ನಾಯಕಿ ಆಗಿದ್ದರು. ಈಗ ‘ಸಿದ್ಲಿಂಗು 2’ ಚಿತ್ರಕ್ಕೆ ಸೋನು ಗೌಡ ನಾಯಕಿ. ನಿರ್ದೇಶಕ ವಿಜಯ್ ಪ್ರಸಾದ್ ಅವರು ‘ಸಿದ್ಲಿಂಗು’ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ರಮ್ಯಾ ಬಗ್ಗೆ ಅವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More