ಸಿಗಂದೂರು ಚೌಡೇಶ್ವರಿ ಸೇತುವೆ ನಿರ್ಮಾಣದಿಂದ ದೇವಿಯ ಮಹಾಮಂಗಳಾರತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿದೆ: ಭಕ್ತೆ
ಸಿಗಂದೂರು ಚೌಡೇಶ್ವರಿ ಸೇತುವೆ ಉದ್ಘಾಟನೆಯಾಗಿರುವ ಹಿನ್ನೆಲೆ ಸಿಗಂದೂರುಗೆ ಬಸ್ಗಳ ಸಂಖ್ಯೆ ಹೆಚ್ಚಿಸಲಾಗಿದೆ ಮತ್ತು ದೇವಸ್ಥಾನ ತೆರೆದಿಡುವ ಸಮಯವನ್ನು 6 ಗಂಟೆಯಿಂದ 9 ಗಂಟೆವರೆಗೆ ವಿಸ್ತರಿಸಲಾಗಿದೆ. ಮೊದಲಾದರೆ ಬೇರೆ ಬೇರೆ ಊರುಗಳಿಂದ ಬರುತ್ತಿದ್ದ ಭಕ್ತಾದಿಗಳಿಗೆ ದೇವಿಯ ಮಹಾಮಂಗಳಾರತಿಯಲ್ಲಿ ಪಾಲ್ಗೊಳ್ಳುವುದು ಸಾಧ್ಯವಾಗುತ್ತಿರಲಿಲ್ಲ, ಇದನ್ನು ನಿರ್ಮಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದು ಭಕ್ತರು ಹೇಳುತ್ತಾರೆ.
ಶಿವಮೊಗ್ಗ, ಜುಲೈ 16: ಶರಾವತಿ ಹಿನ್ನೀರಿನ ಮೇಲೆ ನಿರ್ಮಾಣವಾಗಿರುವ ಸಿಗಂದೂರು ಚೌಡೇಶ್ವರಿ ಸೇತುವೆ ಲೋಕಾರ್ಪಣೆಯಾಗಿದ್ದು ಸ್ಥಳೀಯ ಮತ್ತು ಸುತ್ತಮುತ್ತಲಿನ ಜನರಲ್ಲಿ ಹರ್ಷದ ಹೊಳೆ ಹರಿಸಿದೆ. ಮೊದಲಾದರೆ ಸಿಗಂದೂರು ಚೌಡೇಶ್ವರಿಯ ದರ್ಶನ ಪಡೆಯಬೇಕಾದರೆ ಸುತ್ತುಬಳಸಿ ಬರಬೇಕಾಗುತಿತ್ತು, ಅದರೆ ಈಗ ಬಹಳ ಬೇಗ ಬಂದು ಬಿಡಬಹುದು ಎಂದು ತಾಯಿಯ ದರ್ಶನಕ್ಕೆ ಶಿವಮೊಗ್ಗದಿಂದ ಬಂದಿರುವ ಕುಟುಂಬದ ಮಹಿಳಾ ಸದಸ್ಯರೊಬ್ಬರು ಹೇಳುತ್ತಾರೆ. ಸೇತುವೆಯನ್ನು ಬಹಳ ಸುಂದರವಾಗಿ ನಿರ್ಮಿಸಲಾಗಿದೆ, ಅದರ ಮೇಲಿಂದ ಬರುವಾಗ ಯಾವುದೋ ಬೇರೆ ದೇಶದಲ್ಲಿರುವ ಭಾವನೆ ಹುಟ್ಟುತ್ತದೆ ಸೇತುವೆ ಮುಖಾಂತರ ದೇವಸ್ಥಾನಕ್ಕೆ ಬರೋದು ವಿಶಿಷ್ಟ ಅನುಭೂತಿ ನೀಡುತ್ತದೆ ಎಂದು ಅವರು ಹೇಳುತ್ತಾರೆ
ಇದನ್ನೂ ಓದಿ: ಸಿಗಂದೂರು ಸೇತುವೆ ಉದ್ಘಾಟನೆ; ನಿತಿನ್ ಗಡ್ಕರಿ ವಿರುದ್ಧ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು

ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
